ನಾನು ರಾಜೀನಾಮೆ ನೀಡುವ ಪ್ರಮೇಯವೇ ಇಲ್ಲ, ದೆಹಲಿಯಿಂದ ಬಿಎಸ್‌ವೈ ಸಂದೇಶ!
ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ, ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಯಡಿಯೂರಪ್ಪ ದೆಹಲಿಯಲ್ಲಿ ಹೇಳಿದ್ದಾರೆ.
ಬೆಂಗಳೂರು (ಜು. 17): ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ, ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಯಡಿಯೂರಪ್ಪ ದೆಹಲಿಯಲ್ಲಿ ಹೇಳಿದ್ದಾರೆ.
ಕುತೂಹಲ ಮೂಡಿಸಿದ ಬಿಜೆಪಿ ವಲಸಿಗ ಸಚಿವರ ನಡೆ: ರಾಜ್ಯದಲ್ಲಿ ಬಿರುಸಿನ ಚಟುವಟಿಕೆ
'ರಾಜೀನಾಮೆ ಕೊಡಿ ಎಂದು ಹೈಕಮಾಂಡ್ ಹೇಳಿಲ್ಲ, ನಾನ್ಯಾಕೆ ರಾಜೀನಾಮೆ ಕೊಡಬೇಕು.? ಎಂದು ಪ್ರಶ್ನಿಸಿದ್ದಾರೆ. ಆರು ತಿಂಗಳ ಬಳಿಕ ಇದೇ ಮೊದಲ ಬಾರಿ ಬಿಎಸ್‌ವೈ, ಪಿಎಂ ಮೋದಿ ಭೇಟಿಗೆ ದೆಹಲಿಗೆ ತೆರಳಿದ್ದಾರೆ. ಮೇಕೆದಾಟು ವಿವಾದ, ನೀರಾವರಿ ಯೋಜನೆಗಳ ಅನುಷ್ಠಾನ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.