ಬೆಂಗಳೂರಿನಲ್ಲಿ ಮೋದಿ ರೋಡ್‌ ಶೋ ಇಲ್ಲ: ಎಸ್‌ ಟಿ ಸೋಮಶೇಖರ್

ರಾಜ್ಯಕ್ಕೆ 20 ಮತ್ತು 21ರಂದು ಎರಡು ದಿನದ ಪ್ರವಾಸವನ್ನು ಪ್ರಧಾನಿ ನರೇಂದ್ರ ಮೋದಿ (PM Modi)  ಕೈಗೊಂಡಿದ್ದಾರೆ. ಬೆಂಗಳೂರು ಮತ್ತು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಕೊಮ್ಮಘಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ .15 ಸಾವಿರ ಕೋಟಿ ವೆಚ್ಚದ ಸಬ್‌ಅರ್ಬನ್‌ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 19): ರಾಜ್ಯಕ್ಕೆ 20 ಮತ್ತು 21ರಂದು ಎರಡು ದಿನದ ಪ್ರವಾಸವನ್ನು ಪ್ರಧಾನಿ ನರೇಂದ್ರ ಮೋದಿ (PM Modi) ಕೈಗೊಂಡಿದ್ದಾರೆ. ಬೆಂಗಳೂರು ಮತ್ತು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಕೊಮ್ಮಘಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ .15 ಸಾವಿರ ಕೋಟಿ ವೆಚ್ಚದ ಸಬ್‌ಅರ್ಬನ್‌ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಂಗಳೂರು ಹೊರವಲಯಕ್ಕೆ ಸಂಪರ್ಕ ಕಲ್ಪಿಸುವ ಯೋಜನೆಗೆ ಚಾಲನೆ ದೊರಕಲಿದೆ. ಇದರ ಜತೆಗೆ 6 ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲಾಗುವುದು. ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೂ ಹಸಿರು ನಿಶಾನೆ ಸಿಗಲಿದೆ. ಎಸ್‌ಟಿಆರ್‌ಆರ್‌ ಯೋಜನೆಗೂ ಶಂಕುಸ್ಥಾಪನೆ ನೇರವೇರಲಿದೆ. 

ಬೆಂಗಳೂರು ಅರಮನೆ ಮೈದಾನದಲ್ಲಿ 'ಮಣ್ಣು ಉಳಿಸಿ' ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರಲ್ಲಿ ಪ್ರಧಾನಿ ಮೋದಿಯವರ ರೋಡ್ ಶೋ (Road Show) ಇರುವುದಿಲ್ಲ, ಇದು ಸರ್ಕಾರಿ ಕಾರ್ಯಕ್ರಮ, ರಾಜಕೀಯ ಸಮಾವೇಶ ಅಲ್ಲ, ಎಲ್ಲಾ ನಾಯಕರಿಗೂ ಆಹ್ವಾನವಿದೆ ಎಂದು ಸಚಿವ ಎಸ್‌ಟಿ ಸೋಮಶೇಖರ್ ಹೇಳಿದ್ದಾರೆ. 

Related Video