ಮಹಾರಾಷ್ಟ್ರ ರೀತಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳುತ್ತೆ, ಜಾರಕಿಹೊಳಿ ಬಾಂಬ್!

ಕರ್ನಾಟಕ ಸರ್ಕಾರ ಬೀಳಿಸುವುದು ಬೇಕಿಲ್ಲ, ಮಹಾರಾಷ್ಟ್ರ ರೀತಿಯಲ್ಲೇ ಬಿದ್ದು ಹೋಗಲಿದೆ ಎಂದು ರಮೇಶ್ ಜಾರಕಿಹೊಳಿ ಎಚ್ಚರಿಸಿದ್ದಾರೆ. ಇದರ ನಡುವೆ ಕಾಂಗ್ರೆಸ್ ನಡುವಿನ ಒಳಜಗಳ ಹೆಚ್ಚಾಗುತ್ತಿದೆ. ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

ಕಾಂಗ್ರೆಸ್ ಸರ್ಕಾರ ಬೀಳಿಸುವ ಹುನ್ನಾರ ನಡೆಯುತ್ತಿದೆ ಎಂದು ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಇದಕ್ಕೆ ತಿರಗೇಟು ನೀಡಿರುವ ರಮೇಶ್ ಜಾರಕಿಹೊಳಿ, ಸರ್ಕಾರ ಬೀಳಿಸಲು ಆಪರೇಶನ್ ಕಮಲ ಅಗತ್ಯವಿಲ್ಲ. ಮಹಾರಾಷ್ಟ್ರ ರೀತಿಯಲ್ಲೇ ಕರ್ನಾಟಕದಲ್ಲೂ ಆಗಲಿದೆ ಎಂದು ಎಚ್ಚರಿಸಿದ್ದಾರೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಬಣ ಹಾಗೂ ಡಿಕೆ ಶಿವಕುಮಾರ್ ನಡುವಿನ ಬಣಗಳ ನಡುವಿನ ಗುದ್ದಾಟ ಜೋರಾಗುತ್ತಿದೆ. ಬಹಿರಂಗ ಹೇಳಿಕೆಗಳು ಬಣ ರಾಜಕೀಯ ಕಂದವನ್ನು ಹೆಚ್ಚಿಸುತ್ತಿದೆ.

Related Video