ಕರಾವಳಿಯಲ್ಲಿ ಮಳೆ ಆರ್ಭಟ, ಶಾಲಾ ಕಾಲೇಜುಗಳಿಗೆ ರಜೆ, ನದಿ ತೀರದ ಜನರಿಗೆ ಎಚ್ಚರಿಕೆ
ರಾಜ್ಯದ ಕರಾವಳಿ ಭಾಗದಲ್ಲಿ ನಿರಂತರ ಮಳೆ ಮುಂದುವರಿದಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುರುವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಉತ್ತರ ಕನ್ನಡದಲ್ಲೂ ಆರೆಂಜ್ ಅಲರ್ಟ್ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೂರೂ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ವೀರೇಂದ್ರ ಹೆಗ್ಗಡೆ ಸಮಾಜ ಸೇವೆಗೆ ಪ್ರಧಾನಿ ಮೋದಿ ಗಿಫ್ಟ್, ರಾಜ್ಯಸಭೆಗೆ ನಾಮ ನಿರ್ದೇಶನ!
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇನ್ನೂ 4 ದಿನಗಳ ಕಾಲ ಗಾಳಿಸಹಿತ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, 20.45 ಸೆಂ.ಮೀ.ಗೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಮುಖ್ಯವಾಗಿ ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಘಟ್ಟಪ್ರದೇಶಗಳಲ್ಲೂ ಭಾರೀ ಮಳೆ ಮುಂದುವರಿದಿದ್ದು ಕೊಡಗಿನ ಜಿಲ್ಲೆಯ ಎಲ್ಲ ಶಾಲೆ ಕಾಲೇಜುಗಳಿಗೆ ಮತ್ತು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಕಳಸ, ಎನ್.ಆರ್.ಪುರ, ಮೂಡಿಗೆರೆ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.