ಪುನೀತ್‌ಗೆ ಪದ್ಮ ಪ್ರಶಸ್ತಿ ಶಿಫಾರಸು: ಇಂದಿನ ಸಭೆಯಲ್ಲಿ ಮಹತ್ವದ ನಿರ್ಧಾರ

ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕು ಎಂಬ ಅಭಿಮಾನಿಗಳ ಒತ್ತಾಯ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಮರಣೋತ್ತರ ‘ಪದ್ಮ ಶ್ರೀ’ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ನ. 08): ನಟ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರಿಗೆ ಪದ್ಮ ಪ್ರಶಸ್ತಿ (Padma Award) ನೀಡಬೇಕು ಎಂಬ ಅಭಿಮಾನಿಗಳ ಒತ್ತಾಯ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಮರಣೋತ್ತರ ‘ಪದ್ಮ ಶ್ರೀ’ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. 

ಅಪ್ಪು ಅವರನ್ನು ಪಾಲಿಟಿಕ್ಸ್‌ಗೆ ತರಲು ಪ್ರಯತ್ನಿಸಿ ಸೋತೆ, ಡಿಕೆಶಿ ಅಚ್ಚರಿ ಹೇಳಿಕೆ

ನಟ ಪುನೀತ್‌ ಅಕಾಲಿಕ ನಿಧನದ ಬೆನ್ನಲ್ಲೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿಸುವಂತೆ ಕೂಗು ಕೇಳಿಬಂದಿತ್ತು. ಆದರೆ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡುವ ನಿಯಮಗಳಲ್ಲಿ ಅವಕಾಶವಿಲ್ಲದ ಕಾರಣ ಸರ್ಕಾರ ಸುಮ್ಮನಾಗಿತ್ತು. ಇದೀಗ ರಾಜ್ಯಾದ್ಯಂತ ಕರ್ನಾಟಕ ರತ್ನ ಹಾಗೂ ಪದ್ಮ ಶ್ರೀ ಪ್ರಶಸ್ತಿಗೆ ಒತ್ತಾಯ ಜೋರಾಗುತ್ತಿದೆ. ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಪದ್ಮಶ್ರೀ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ. 

Related Video