ತೀವ್ರಗೊಂಡ ಪಂಚಮಸಾಲಿ ಹೋರಾಟ, ಮಾರ್ಚ್ 4 ರವರೆಗೆ ಧರಣಿ ಸತ್ಯಾಗ್ರಹಕ್ಕೆ ನಿರ್ಧಾರ

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗೆ ಆಗ್ರಹಿಸಿ, ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡದುಕೊಂಡಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 21): ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗೆ ಆಗ್ರಹಿಸಿ, ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡದುಕೊಂಡಿದೆ. ಮಾರ್ಚ್ 4 ರವರೆಗೆ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸುವುದಾಗಿ ಜಯ ಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ. 

'ನೋಟಿಸ್‌ಗೆ ಬಾಯಿ ಬಂದಾಗಲ್ಲ, ಪಂಪ್ ಹೊಡೆಯುವವನಲ್ಲ' ಯತ್ನಾಳ್ ಗುಡುಗು

'ಬೇರೆ ಬೇರೆ ಊರುಗಳಿಂದ ಜನ ಬಟ್ಟೆ, ಬುತ್ತಿ ಕಟ್ಟಿಕೊಂಡು ಬಂದು ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಅವರೆಲ್ಲರ ಕೋರಿಕೆ ಮೇರೆಗೆ ನಾವು ಮಾರ್ಚ್ 4 ರವರೆಗೆ ಧರಣಿ ಸತ್ಯಾಗ್ರಹ ನಡೆಸಲು ಸಿದ್ಧರಾಗಿದ್ದೇವೆ' ಎಂದು ಶ್ರೀಗಳು ತಿಳಿಸಿದ್ದಾರೆ. 

Related Video