ಪಂಚಮಸಾಲಿ ಮೀಸಲಾತಿ ಹೋರಾಟ ಇಬ್ಭಾಗ, ಅವರೊಂದು ದಿಕ್ಕು, ಇವರೊಂದು ದಿಕ್ಕು.!
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಕೂಡಲಸಂಗಮ ಪಂಚಮಸಾಲಿ ಮಠದ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೋರಾಟ ತೀವ್ರಗೊಳಿಸಲು ಅವರು ನಿರ್ಧರಿಸಿದ್ದಾರೆ.
ಬೆಂಗಳೂರು (ಫೆ. 24): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಕೂಡಲಸಂಗಮ ಪಂಚಮಸಾಲಿ ಮಠದ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೋರಾಟ ತೀವ್ರಗೊಳಿಸಲು ಅವರು ನಿರ್ಧರಿಸಿದ್ದಾರೆ.
ಪಂಚಮಸಾಲಿ ಮೀಸಲಾತಿ ಹೋರಾಟ ಇಬ್ಭಾಗ, ಅವರೊಂದು ದಿಕ್ಕು, ಇವರೊಂದು ದಿಕ್ಕು..!
‘ಮೀಸಲಾತಿ ಬೇಡಿಕೆ ಈಡೇರುವವರೆಗೂ ಈ ಹೋರಾಟ ಮುಂದುವರಿಯಲಿದೆ. ಇನ್ನು ಎರಡು ದಿನಗಳಲ್ಲಿ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ನಿರ್ಧರಿಸುತ್ತೇವೆ. ಈ ಸಂಬಂಧ ಸಮುದಾಯದ ಸಂಘಟನೆಗಳ ಪದಾಧಿಕಾರಿಗಳು, ಸಮಯದಾಯ ಶಾಸಕರು, ಮಂತ್ರಿಗಳೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದೇವೆ. ಈವರೆಗೂ ರಾಜ್ಯ ಸರ್ಕಾರದಿಂದ ಯಾವುದೇ ಆಮಂತ್ರಣ ಬಂದಿಲ್ಲ. ನಾನು ಯಾರಿಗೂ ಆಮಂತ್ರಣ ಕೊಡುವುದಿಲ್ಲ. ಸರ್ಕಾರದ ಪ್ರತಿನಿಧಿಗಳೇ ಪ್ರತಿಭಟನಾ ಸ್ಥಳಕ್ಕೆ ಬರಬೇಕು. ನಾನು ಇಲ್ಲಿಯೇ ಕುಳಿತು ಚರ್ಚಿಸುತ್ತೇನೆ. ನಾನು ಧರಣಿ ಸ್ಥಳ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ’ ಎಂದಿದ್ದಾರೆ.