ಸರ್ಕಾರದ ಮೇಲೆ ಹೆಚ್ಚಿದ ಒತ್ತಡ, ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಎಸ್‌ಡಿಪಿಐ, ಪಿಎಫ್‌ಐ.?

ರಾಜ್ಯದಲ್ಲಿ ಶಾಂತಿ ಮತ್ತು ಕೋಮುಸೌಹಾರ್ದತೆಯನ್ನು ಕದಡುವ ಸಮಾಜದ್ರೋಹಿ ಶಕ್ತಿಗಳ ವಿರುದ್ಧ ಸರ್ಕಾರ ಸಮರವನ್ನು ಸಾರಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯಾವುದೇ ರಾಜಿ ಇಲ್ಲ’ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.  

First Published Jul 30, 2022, 4:51 PM IST | Last Updated Jul 30, 2022, 4:51 PM IST

10 ದಿನಗಳಲ್ಲಿ 3 ಮರ್ಡರ್.. ಕರ್ನಾಟಕದ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮತಾಂಧ ಶಕ್ತಿಗಳು ಅಟ್ಟಹಾಸ ಮೆರೆಯುತ್ತಿವೆ. ಪ್ರವೀಣ್‌ ನೆಟ್ಟಾರು ಹತ್ಯೆಗೆ ಸಹಕಾರ ನೀಡಿದ ಆರೋಪದಲ್ಲಿ ಪಿಎಫ್‌ಐ ಸದಸ್ಯರು ಎನ್ನಲಾದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.  ಹೀಗಾಗಿ ಮತಾಂಧ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳನ್ನು ರದ್ದುಗೊಳಿಸಬೇಕೆಂದು ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಕೂಗು ಕೇಳಿ ಬರುತ್ತಿದೆ. ಸರ್ಕಾರದ ಮೇಲೆ ಒತ್ತಡವನ್ನೂ ತರಲಾಗುತ್ತಿದೆ. 

ಸರಣಿ ಹತ್ಯೆಗೆ ಬೆಚ್ಚಿಬಿದ್ದ ಕರಾವಳಿ: ಮತಾಂಧ ಶಕ್ತಿಗಳು ಅಟ್ಟಹಾಸಕ್ಕೆ ಯಾವಾಗ ಬ್ರೇಕ್.?

ರಾಜ್ಯದಲ್ಲಿ ಶಾಂತಿ ಮತ್ತು ಕೋಮುಸೌಹಾರ್ದತೆಯನ್ನು ಕದಡುವ ಸಮಾಜದ್ರೋಹಿ ಶಕ್ತಿಗಳ ವಿರುದ್ಧ ಸರ್ಕಾರ ಸಮರವನ್ನು ಸಾರಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯಾವುದೇ ರಾಜಿ ಇಲ್ಲ’ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.  ಅಹಿತಕರ ಘಟನೆಯಲ್ಲಿ ಭಾಗಿಯಾಗುವ ಪಿಎಫ್‌ಐ, ಎಸ್‌ಡಿಪಿಐ ನಿಷೇಧ ಮಾಡುವ ಅಧಿಕಾರ ರಾಜ್ಯಕ್ಕಿಲ್ಲ. ಕೇಂದ್ರ ಸರ್ಕಾರವು ಈ ಬಗ್ಗೆ ಗಮನಹರಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದೆ. ರಾಜ್ಯ ಸರ್ಕಾರವು ಸಂದರ್ಭಾನುಸಾರ ವರದಿಯನ್ನು ಕಳುಹಿಸಿದೆ’ ಎಂದಿದ್ದಾರೆ.