ಪ್ರವೀಣ್ ಹತ್ಯೆ: ಕೇರಳದ ಮತೀಯ ಸಂಘಟನೆಗಳಿಗೆ ಸ್ಥಳೀಯರ ಸಾಥ್...?
ಬೆಳ್ಳಾರೆ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಘಟನೆ ಹಿಂದೆ ಕೇರಳ ನಂಟು ಹೊಂದಿರುವ ಸಾಧ್ಯತೆ ಬಗ್ಗೆ ಪೊಲೀಸ್ ಇಲಾಖೆ ಪರಿಶೀಲನೆ ನಡೆಸುತ್ತಿದೆ. ವಾರದ ಹಿಂದೆ ಬೆಳ್ಳಾರೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಕೇರಳ ಯುವಕ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಈ ಹತ್ಯೆ ನಡೆಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಮಂಗಳೂರು (ಜು. 28): ಬೆಳ್ಳಾರೆ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಘಟನೆ ಹಿಂದೆ ಕೇರಳ ನಂಟು ಹೊಂದಿರುವ ಸಾಧ್ಯತೆ ಬಗ್ಗೆ ಪೊಲೀಸ್ ಇಲಾಖೆ ಪರಿಶೀಲನೆ ನಡೆಸುತ್ತಿದೆ. ವಾರದ ಹಿಂದೆ ಬೆಳ್ಳಾರೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಕೇರಳ ಯುವಕ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಈ ಹತ್ಯೆ ನಡೆಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಕೊಲೆ ನಡೆಸಿದ ದುಷ್ಕರ್ಮಿಗಳು ಕೇರಳ ನೋಂದಣಿಯ ದ್ವಿಚಕ್ರ ವಾಹನದಲ್ಲಿ ಆಗಮಿಸಿದ್ದರು ಎಂಬುದು ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆದರೆ ಆ ವಾಹನದ ನೋಂದಣಿಯನ್ನು ಸರಿಯಾಗಿ ಗುರುತಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ತನಿಖೆ ತೀವ್ರಗೊಳಿಸಲಿದೆ ಎಂದು ಮೂಲಗಳು ತಿಳಿಸಿವೆ. ಪ್ರವೀಣ್‌ನ ಚಲನವಲನದ ಬಗ್ಗೆ ಕೆಲವು ದಿನಗಳಿಂದ ನಿಗಾ ಇರಿಸಿದ ಸ್ಥಳೀಯರು ಹಂತಕರಿಗೆ ಮಾಹಿತಿ ಕೊಟ್ಟಿರುವ ಅನುಮಾನ ವ್ಯಕ್ತವಾಗಿದೆ.
ಹತ್ಯೆ ಘಟನೆ ಬಗ್ಗೆ ಎಲ್ಲ ಆಯಾಮಗಳಿಂದ ತನಿಖೆ ನಡೆಯುತ್ತಿದೆ. 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.