ಕನ್ನಡ ಸಾಹಿತ್ಯ ಸಮ್ಮೇಳನ ಸಾರಥಿ ಡಾ.ದೊಡ್ಡರಂಗೇಗೌಡ ವಿಶೇಷ ಸಂದರ್ಶನ
ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಇನ್ನು ಕೆಲವು ದಿನಗಳಷ್ಟೇ ಬಾಕಿ ಇದ್ದು, ಕನ್ನಡ ನುಡಿ ತೇರು ಎಳೆಯರು ಯಾಲಕ್ಕಿ ಕಂಪಿನ ನಗರಿ ಸಜ್ಜಾಗುತ್ತಿದ್ದು, ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನಾಡಿನ ವಿವಿಧೆಡೆಯ ಸಾಹಿತ್ಯಾಸಕ್ತರು ತುದಿಗಾಲಲ್ಲಿ ನಿಂತಿದ್ದಾರೆ.
ಬೆಂಗಳೂರು (ಜ.02): ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಇನ್ನು ಕೆಲವು ದಿನಗಳಷ್ಟೇ ಬಾಕಿ ಇದ್ದು, ಕನ್ನಡ ನುಡಿ ತೇರು ಎಳೆಯರು ಯಾಲಕ್ಕಿ ಕಂಪಿನ ನಗರಿ ಸಜ್ಜಾಗುತ್ತಿದ್ದು, ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನಾಡಿನ ವಿವಿಧೆಡೆಯ ಸಾಹಿತ್ಯಾಸಕ್ತರು ತುದಿಗಾಲಲ್ಲಿ ನಿಂತಿದ್ದಾರೆ. ಕೊರೋನಾದಿಂದ ಎರಡು ವರ್ಷಗಳಿಂದ ಸಮ್ಮೇಳನ ನಡೆಸಲು ಸಾಧ್ಯವಾಗಿರಲಿಲ್ಲ. ಇದರಿಂದ ಸಾಹಿತ್ಯಾಸಕ್ತರು ಯಾಲಕ್ಕಿ ನಗರಿಯಲ್ಲಿ ನಡೆಯುತ್ತಿರುವ ಸಾಹಿತ್ಯ ಜಾತ್ರೆಯಲ್ಲಿ ಪಾಲ್ಗೊಳ್ಳಲು ಉತ್ಸುಕರಾಗಿ ಕಾಯುತ್ತಿದ್ದಾರೆ. ಜ. 6, 7 ಮತ್ತು 8ರಂದು ಹಾವೇರಿಯಲ್ಲಿ ‘86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ’ಕ್ಕೆ ದಿನಗಣನೆ ಶುರುವಾಗಿದೆ. ಸಾಹಿತಿ ದೊಡ್ಡರಂಗೇಗೌಡರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಸಮ್ಮೇಳನಕ್ಕೆ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ ಅಜ್ಜಯ್ಯನ ಗದ್ದುಗೆ ಎದುರಿನ ನೂರಾರು ಎಕರೆ ಬಯಲು ಜಾಗೆಯಲ್ಲಿ ಬೃಹತ್ ವೇದಿಕೆ ನಿರ್ಮಾಣ ಕಾಮಗಾರಿ ಕೆಲವು ದಿನಗಳಿಂದ ನಡೆಯುತ್ತಿದೆ. ಇದೀಗ ಸಮ್ಮೇಳನದ ಸಾರಥಿ ಡಾ.ದೊಡ್ಡರಂಗೇಗೌಡ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ವಿಶೇಷ ಸಂದರ್ಶನವನ್ನು ನೀಡಿದ್ದು, ಸಾಹಿತ್ಯ ಸಮ್ಮೇಳನದ ಬಗ್ಗೆ ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ.