News Hour: ರಾಜ್ಯದಲ್ಲಿ ಇನ್ನೂ ತಣ್ಣಗಾಗದ ಪೆನ್‌ಡ್ರೈವ್‌ ರಾಜಕೀಯ!

ರಾಜ್ಯದಲ್ಲಿ ಇನ್ನೂ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ರಾಜಕೀಯ ತಣ್ಣಗಾಗಿಲ್ಲ. ಮಂಗಳವಾರ ಕೂಡ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರ ನಡುವೆ ಮಾತಿನ ಸಮರ ನಡೆದಿವೆ.

First Published May 8, 2024, 12:01 AM IST | Last Updated May 8, 2024, 12:01 AM IST

ಬೆಂಗಳೂರು (ಮೇ. 7): ದೇವರಾಜೇಗೌಡ ಬೆನ್ನಲ್ಲೇ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಕೂಡ ಕಾಂಗ್ರೆಸ್‌ ವಿರುದ್ಧ ಸಿಡಿದೆದ್ದಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಮಾಜಿ ಸಿಎಂ ವಾಗ್ದಾಳಿ ನಡೆಸಿದ್ದಾರೆ. ಅಶ್ಲೀಲ ವಿಡಿಯೋ ರಿಲೀಸ್ ಮಾಡಿದ್ದೇ ಡಿಕೆಶಿ ಎಂದು ಆರೋಪಿಸಿದ್ದಾರೆ.

ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಎಚ್‌ಡಿ ಕುಮಾರಸ್ವಾಮಿ ಆರೋಪಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಕೌಂಟರ್‌ ಕೊಟ್ಟಿದ್ದಾರೆ. 'ನಮ್ಮ ಕಾಂಗ್ರೆಸ್‌ ಸರ್ಕಾರಕ್ಕೆ ಒಂದು ಜವಾಬ್ದಾರಿ ಇದೆ. ಎಸ್‌ಐಟಿ ತನಿಖೆ ಬಗ್ಗೆ ಅನುಮಾನ ಪಟ್ಟರೆ ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ.

Prajwal Revanna Case: ಪೆನ್‌ಡ್ರೈವ್ ಕೇಸ್ ಹೆಸರಲ್ಲಿ ರಾಜಕಾರಣ! ಹೇಗೆ ನಡೆಯಲಿದೆ ವಿಚಾರಣೆ? ಎತ್ತ ಸಾಗುತ್ತಿದೆ ಪ್ರಕರಣ?

ಪ್ರಜ್ವಲ್‌ ರೇವಣ್ಣ ಕೇಸ್‌ಗೂ ನನಗೂ ಯಾವುದೇ ಸಂಬಂಧವೇ ಇಲ್ಲ. ಇದು ಬಿಜೆಪಿ-ಜೆಡಿಎಸ್‌ ನಾಯಕರ ರಾಜಕೀಯ ಷಡ್ಯಂತ್ರ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಬಿಜೆಪಿ ಮುಖಂಡ ದೇವರಾಜೇಗೌಡ ಸುಳ್ಳಿನ ಹೇಳಿಕೆ ನೀಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.