ಟಿಪ್ಪು ಎಕ್ಸ್​ಪ್ರೆಸ್ ರೈಲಿಗೆ ಒಡೆಯರ್ ಹೆರಿಡುವಂತೆ ಪ್ರತಾಪ್ ಸಿಂಹ ಆಗ್ರಹ

ಟಿಪ್ಪು ಎಕ್ಸ್​ಪ್ರೆಸ್‌ ಬದಲಾಗಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ಎಂದು ಹೆಸರಿಡುವಂತೆ ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ. 

First Published Feb 13, 2022, 3:07 PM IST | Last Updated Feb 13, 2022, 3:07 PM IST

ಮೈಸೂರು(ಫೆ.13):ಟಿಪ್ಪು ಎಕ್ಸ್​ಪ್ರೆಸ್ (Tipu Express) ಬದಲಾಗಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು (Wodeyar Express Train) ಎಂದು ಹೆಸರಿಡುವಂತೆ ಸಂಸದ ಪ್ರತಾಪ್ ಸಿಂಹ  (MP Pratap Simha) ಆಗ್ರಹಿಸಿದ್ದಾರೆ. ದೆಹಲಿಯಲ್ಲಿ  ರೈಲ್ವೆ ಸಚಿವ ಅಶ್ವಿನಿ‌ ವೈಷ್ಣವ್‌ ಅವರನ್ನು ಭೇಟಿಯಾಗಿರುವ ಸಂಸದ ಪ್ರತಾಪ್ ಸಿಂಹ ಲಿಖಿತ ಮನವಿ ಸಲ್ಲಿಸಿದ್ದಾರೆ. ಮೈಸೂರಿಗೆ ರೈಲು ಸೇವೆ ಕಲ್ಪಿಸುವಲ್ಲಿ ಒಡೆಯರ್‌ ಮಹಾರಾಜರ ಕೊಡುಗೆ ಬಹಳಷ್ಟು ಇದೆ. ಹೀಗಾಗಿ ಒಡೆಯರ್ ಎಕ್ಸ್‌ಪ್ರೆಸ್‌ ಎಂದು ಹೆಸರಿಡಬೇಕು. 

ಯಾದಗಿರಿಯ ಕಡೇಚೂರು ಕೈಗಾರಿಕಾ ಪ್ರದೇಶ 7 ಸಾವಿರ ಎಕರೆಗೆ ವಿಸ್ತರಣೆ

ಮೈಸೂರು (Mysuru) ಸಂಸ್ಥಾನದ ಅರಸನಾದ 10 ನೇ ಚಾಮರಾಜ ಒಡೆಯರ್ ಮತ್ತು ನಾಲ್ವಡಿ ಕೃಷ್ಣರಾಜ್ ಒಡೆಯರ್ ಅವರು ಹಳೆಯ ಮೈಸೂರು ಭಾಗದಲ್ಲಿ ರೈಲ್ವೆ ಸಂಪರ್ಕ ಕಲ್ಪಿಸಲು ಹೆಚ್ಚಿನ ಕೊಡುಗೆ ಕೊಟ್ಟಿದ್ದರು. ಟಿಪ್ಪು ಒಂದು ಹಳಿ ಆದರೂ ಹಾಕಿದ್ದಾರಾ? ರೈಲ್ವೆ ಯೋಜನೆಗೂ ಟಿಪ್ಪು ಸುಲ್ತಾನ್‌ಗೂ ಏನು ಸಂಬಂಧ? ಎಂದು ಪ್ರಶ್ನಿಸಿರುವ ಸಂಸದ, ಮೈಸೂರು ಒಡೆಯರಿಗೆ ಗೌರವ ಸಲ್ಲಿಸಲು ಟಿಪ್ಪು ಎಕ್ಸ್ ಪ್ರೆಸ್ ಬದಲು ಒಡೆಯರ್ ಹೆಸರಿಡಬೇಕು. ನಾನು ಸಂಸದನಾದಗಿನಿಂದಲೂ ಜನ ಒತ್ತಾಯಿಸುತ್ತಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.