ಸಿದ್ದೇಶ್ವರ ಶ್ರೀಗಳ ಜೊತೆ ಮೋದಿ ಮಾತು: ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ ಎಂದ ಪ್ರಧಾನಿ

ವಿಜಯಪುರದ ಜ್ಞಾನ ಯೋಗಾಶ್ರಮದ  ಸಿದ್ದೇಶ್ವರ ಶ್ರೀಗಳ ಜೊತೆ ಪ್ರಧಾನಿ ಮೋದಿ ಮಾತನಾಡಿದ್ದು, ಶ್ರೀಗಳ ಆರೋಗ್ಯ ಬಗ್ಗೆ ವಿಚಾರಿಸಿದ್ದಾರೆ.
 

Share this Video
  • FB
  • Linkdin
  • Whatsapp

ನಡೆದಾಡುವ ದೇವರಂದೇ ಪ್ರಖ್ಯಾತಿ ಪಡೆದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಆರೋಗ್ಯದ ಪರಿಸ್ಥಿತಿ ಚಿಂತಾಜನಕವಾಗಿದೆ. ಅವರು ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಸ್ವಾಮೀಜಿ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಅವರ ಆರೋಗ್ಯ ವಿಚಾರಿಸಿದ್ದಾರೆ. ನರೇಂದ್ರ ಮೋದಿ ಸ್ವಾಮಿಜಿಗಳೇ ಪ್ರಣಾಮ್‌ ಎಂದ ಕೂಡಲೇ ಅವರ ಧ್ವನಿ ಕೇಳಿ, ಕೈ ಎತ್ತಿ ಮುಗಿದಿದ್ದಾರೆ ಸಿದ್ದೇಶ್ವರ ಶ್ರೀಗಳು. ಸ್ವಾಮೀಜಿ take care of ur health ಎಂದು ಪ್ರಧಾನಿ ಮೋದಿ ಹೇಳಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕರೆ ಮಾಡಿ ಕೊಟ್ಟಿದ್ದಾರೆ. ಇನ್ನು ಸ್ವಾಮೀಜಿಗಳ ದರ್ಶನಕ್ಕಾಗಿ ನಿತ್ಯ ಸಾವಿರಾರು ಭಕ್ತರು, ಜನಪ್ರತಿನಿಧಿಗಳು, ಸಚಿವರು, ಶಾಸಕರುಗಳು ಆಶ್ರಮಕ್ಕೆ ಭೇಟಿ ನೀಡುತ್ತಿದ್ದಾರೆ.

ಇದು ರಾಜ್ಯ ರಾಜಕಾರಣದ ಸಂಕ್ರಮಣದ ಕಾಲ: ಹೇಗಿರಲಿದೆ ಹೊಸ ವರ್ಷದಲ್ಲಿ ನಾಯಕರ ಭವಿಷ್ಯ?

Related Video