ಅಕ್ಷಯ ತೃತೀಯದಂದು ಹಿಂದೂ ಅಂಗಡಿಗಳಲ್ಲೇ ಚಿನ್ನ ಖರೀದಿಸಿ: ಹಿಂದೂಪರ ಸಂಘಟನೆಗಳ ಕರೆ
ದೇವಸ್ಥಾನಗಳಲ್ಲಿನ ಜಾತ್ರೆ, ಮಾವು ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್-ಝಟ್ಕಾ ಕಟ್ (Jhatka Cut) ಮಾಂಸ ಖರೀದಿ ಅಭಿಯಾನಗಳ ಬಳಿಕ ಇದೀಗ ಅಕ್ಷಯ ತೃತೀಯದಂದು (Akshaya Tritiya) ಖರೀದಿಸುವ ಚಿನ್ನದ ವಿಚಾರದಲ್ಲೂ ಹಿಂದೂಪರ ಸಂಘಟನೆಗಳು ಅಭಿಯಾನ ಪ್ರಾರಂಭಿಸಿವೆ.
ಬೆಂಗಳೂರು (ಏ. 25): ದೇವಸ್ಥಾನಗಳಲ್ಲಿನ ಜಾತ್ರೆ, ಮಾವು ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್-ಝಟ್ಕಾ ಕಟ್ (Jhatka Cut) ಮಾಂಸ ಖರೀದಿ ಅಭಿಯಾನಗಳ ಬಳಿಕ ಇದೀಗ ಅಕ್ಷಯ ತೃತೀಯದಂದು (Akshaya Tritiya) ಖರೀದಿಸುವ ಚಿನ್ನದ ವಿಚಾರದಲ್ಲೂ ಹಿಂದೂಪರ ಸಂಘಟನೆಗಳು ಅಭಿಯಾನ ಪ್ರಾರಂಭಿಸಿವೆ.
ಎಲ್ಲ ಹಿಂದೂಗಳು ಹಿಂದೂ ಮಾಲೀಕತ್ವದ ಆಭರಣದ ಅಂಗಡಿಗಳಲ್ಲೇ ಚಿನ್ನ ಖರೀದಿಸಬೇಕು ಎಂದು ಕರೆ ನೀಡಿವೆ. ಮುಸ್ಲಿಮರ ಅಂಗಡಿಯಲ್ಲಿ ಖರೀದಿಸಿದ ಚಿನ್ನದ ಲಾಭಾಂಶದ ಪಾಲು ಕೇರಳದಲ್ಲಿ ಲವ್ ಜಿಹಾದ್, ಮತಾಂತರಗಳಿಗೆ ಬಳಕೆಯಾಗುತ್ತದೆ ಎಂದು ಆರೋಪಿಸಿವೆ. ಈ ಅಭಿಯಾನಕ್ಕೆ ಶ್ರೀರಾಮಸೇನೆ ಬೆಂಬಲ ವ್ಯಕ್ತಪಡಿಸಿದೆ.