Asianet Suvarna News Asianet Suvarna News

ಫೆ. 13 ಕ್ಕೆ ಕರ್ನಾಟಕ ಬಂದ್; ಏನಿರತ್ತೆ? ಏನಿರಲ್ಲ? ಇಲ್ಲಿದೆ ಡಿಟೇಲ್ಸ್

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಫೆ. 13 ರಂದು ಬಂದ್‌ಗೆ ಕರೆ ನೀಡಿವೆ. ಸಾರ್ವಜನಿಕರಿಗೆ ಬಂದ್ ಬಿಸಿ ತಟ್ಟುವ ಸಾಧ್ಯತೆ ಇದೆ. 

 

 

ಬೆಂಗಳೂರು (ಫೆ. 09): ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಫೆ. 13 ರಂದು ಬಂದ್‌ಗೆ ಕರೆ ನೀಡಿವೆ. ಸಾರ್ವಜನಿಕರಿಗೆ ಬಂದ್ ಬಿಸಿ ತಟ್ಟುವ ಸಾಧ್ಯತೆ ಇದೆ. 

ಕಾರ್ಮಿಕ ಸಂಘಟನೆಗಳು, ಸಿಐಟಿಯು ಸೇರಿದಂತೆ 400 ಕ್ಕೂ ಹೆಚ್ಚು ಸಂಘ ಸಂಸ್ಥೆಗಳು, ನಮ್ಮ ಕನ್ನಡ ರಕ್ಷಣಾ ವೇದಿಕೆ, ಜಯಕರ್ನಾಟಕ ಸಂಘಟನೆ, ಕರ್ನಾಟಕ ಸಂಘಟನೆಗಳ ಒಕ್ಕೂಟ, ಚಾಲಕರ ಸಂಘಟನೆಗಳ ಒಕ್ಕೂಟ, ಆಟೋ, ಟ್ಯಾಕ್ಸಿ ಚಾಲಕರ ಸಂಘ ಬಂದ್‌ಗೆ ಬೆಂಬಲ ನೀಡಿವೆ. 

ಖಾತೆ ಕ್ಯಾತೆ: ಹಠ ಗೆದ್ದ ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ

ಫೆ. 13 ಕ್ಕೆ ಬಂದ್‌ಗೆ ಕರೆ ನೀಡಲಾಗಿದ್ದು, ಏನೆಲ್ಲಾ ಇರುತ್ತೆ? ಏನೆಲ್ಲಾ ಇರುವುದಿಲ್ಲ? ಇಲ್ಲಿದೆ ನೋಡಿ.