ಸರಣಿ ಹತ್ಯೆಗೆ ಬೆಚ್ಚಿಬಿದ್ದ ಕರಾವಳಿ; ಮತಾಂಧ ಶಕ್ತಿಗಳ ಅಟ್ಟಹಾಸಕ್ಕೆ ಯಾವಾಗ ಬ್ರೇಕ್..?
ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಉದ್ವಿಗ್ನತೆ ಸಹಜ ಸ್ಥಿತಿಗೆ ಮರಳುವ ಮೊದಲೇ ಜಿಲ್ಲೆಯ ಮತ್ತೊಂದು ಕಡೆ ಯುವಕನ ಹತ್ಯೆ ನಡೆದಿದೆ. ಕಳೆದ 10 ದಿನಗಳಲ್ಲಿ 3 ಹತ್ಯೆ ನಡೆದಿರುವುದು ನಮ್ಮ ಕಾನೂನು ಸುವ್ಯವಸ್ಥೆಯನ್ನು ಕಾನೂನು ಸುವ್ಯವಸ್ಥೆಯನ್ನು ಮತ್ತೊಮ್ಮೆ ಪ್ರಶ್ನಿಸುವಂತೆ ಮಾಡಿದೆ.

ಫಾಜಿಲ್ ಹತ್ಯೆ ಹಿಂದಿನ ನಿಖರ ಕಾರಣ ಗೊತ್ತಾಗಿಲ್ಲ. ಪ್ರತೀಕಾರದ ಹಿನ್ನೆಲೆಯಲ್ಲಿ ನಡೆದ ಹತ್ಯೆಯೋ ಅಥವಾ ಬೇರೆ ವೈಯಕ್ತಿಕ ಕಾರಣ ಇರಬಹುದೋ ಎನ್ನುವುದು ಪೊಲೀಸ್ ತನಿಖೆಯಿಂದ ಗೊತ್ತಾಗಬೇಕಿದೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜು.29ರಿಂದ ಆ.1ರವರೆಗೆ ಸಂಜೆ 6ರಿಂದ ಬೆಳಗ್ಗೆ 6 ಗಂಟೆಯವರೆಗೆ ಕೆಲವು ನಿಬಂರ್‍ಧಗಳನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.