ಕೈ ಪಾದಯಾತ್ರೆ: ಹೈಕೋರ್ಟ್‌ನಿಂದ ಮಹತ್ವದ ಆದೇಶ
ಕಾಂಗ್ರೆಸ್ ಪಾದಯಾತ್ರೆಯಿಂದಾಗಿ ಟ್ರಾಫಿಕ್ ಜಾಮ್ ಹಿನ್ನೆಲೆ ಬೆಂಗಳೂರಲ್ಲಿ ಪ್ರತಿಭಟನೆ, ಮೆರವಣಿಗೆಗೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ಫ್ರೀಡಂಪಾರ್ಕ್ನ ನಿಗದಿತ ಜಾಗದಲ್ಲಿ ಮಾತ್ರ ಅವಕಾಶ ನೀಡಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದೆ.
ಬೆಂಗಳೂರು, (ಮಾ.03): ಕಾಂಗ್ರೆಸ್ ಪಾದಯಾತ್ರೆಯಿಂದಾಗಿ ಟ್ರಾಫಿಕ್ ಜಾಮ್ ಹಿನ್ನೆಲೆ ಬೆಂಗಳೂರಲ್ಲಿ ಪ್ರತಿಭಟನೆ, ಮೆರವಣಿಗೆಗೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ಫ್ರೀಡಂಪಾರ್ಕ್ನ ನಿಗದಿತ ಜಾಗದಲ್ಲಿ ಮಾತ್ರ ಅವಕಾಶ ನೀಡಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದೆ.
ಮೇಕೆದಾಟು ಪಾದಯಾತ್ರೆಗೆ ಇಂದು ಕ್ಲೈಮ್ಯಾಕ್ಸ್: ಬೆಂಗ್ಳೂರಿಗರಿಗೆ ಟ್ರಾಫಿಕ್ ಜಾಮ್ ಬಿಸಿ..!
ಪ್ರತಿಭಟನೆಗಳಿಂದಾಗಿ ದೈನಂದಿನ ಜೀವನದ ಮೇಲೆ ಪರಿಣಾಮವಾಗ್ತಿದೆ. ಟ್ರಾಫಿಕ್ ಜಾಮ್ನಿಂದ ಬೆಂಗಳೂರಿನ ಜನರಿಗೆ ಸಮಸ್ಯೆಯಾಗುತ್ತಿದೆ. ಇಂತಹ ಮೆರವಣಿಗೆಗಳ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕ್ರಮಕ್ಕೆ ಸೂಚನೆ ನೀಡಲಾಗಿದೆ.
ಮೇಕೆದಾಟು ಪಾದಯಾತ್ರೆಯಿಂದಾಗಿ ಟ್ರಾಫಿಕ್ ಜಾಮ್ ಆಗಿ, ನ್ಯಾಯಮೂರ್ತಿಗಳಿಗೂ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಈ ಬಗ್ಗೆ ಪಿಐಎಲ್ ವಿಚಾರಣೆ ವೇಳೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದ್ದು, ಬೆಂಗಳೂರಿನಲ್ಲಿ ಮೆರವಣಿಗೆ, ಧರಣಿ, ರ್ಯಾಲಿಗೆ ಬ್ರೇಕ್ ಹಾಕುವಂತೆ ಕರ್ನಾಟಕದ ಸರ್ಕಾರಕ್ಕೆ ಕೋರ್ಟ್ ಖಡಕ್ ಸೂಚನೆ ಕೊಟ್ಟಿದೆ.