2 ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ; ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ

ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯ ರೈತ ಸಂಘ, ಕಾರ್ಮಿಕ ಸಂಘಟನೆಗಳು ರಸ್ತೆಗಿಳಿದಿವೆ. 
 

First Published Sep 22, 2020, 2:12 PM IST | Last Updated Sep 22, 2020, 2:12 PM IST

ಬೆಂಗಳೂರು (ಸೆ. 22): ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯ ರೈತ ಸಂಘ, ಕಾರ್ಮಿಕ ಸಂಘಟನೆಗಳು ರಸ್ತೆಗಿಳಿದಿವೆ. 

ಕೃಷಿ ಮಸೂದೆ ಖಂಡಿಸಿ ಸರ್ಕಾರದ ವಿರುದ್ಧ ಅನ್ನದಾತರ ಸಮರ; ಬೀದಿಗಿಳಿದಿದ್ದಾರೆ ರೈತರು

ಬೆಂಗಳೂರಿನ ಫ್ರೀಡಂ ಪಾರ್ಕ್ ರಸ್ತೆಯುದ್ದಕ್ಕೂ ಮಲಗಿ ಪ್ರತಿಭಟನೆ ನಡೆಸುತ್ತಿದ್ದಾರೆ. 30 ಕ್ಕೂ ಹೆಚ್ಚು ರೈತ  ಸಂಘಟನೆಗಳು ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿವೆ. ಈ ಕಾಯ್ದೆಯನ್ನು ಅಂಗೀಕರಿಸುವ ತೀರ್ಮಾನವನ್ನು ಯಾವುದೇ ಕಾರಣಕ್ಕೂ ತೆಗೆದುಕೊಳ್ಳಬಾರದು ಎಂಬ ಕಾರಣಕ್ಕೆ ಅಧಿವೇಶನ ಮುಗಿಯುವ ತನಕ ಗಾಂಧಿ ಪ್ರತಿಮೆ ಮುಂಭಾಗ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ಧಾರೆ.