CID Notice: ಪ್ರಿಯಾಂಕ್ ಖರ್ಗೆ ಹಿಂದೆ ಪಕ್ಷ ಇದೆ, ಬೆದರಿಕೆಗೆ ಬಗ್ಗಲ್ಲ; ಸಿದ್ದರಾಮಯ್ಯ
545 ಪಿಎಸ್‌ಐ ಹುದ್ದೆಗಳ ನೇಮಕಾತಿ (PSI Recruitment)ಪ್ರಕ್ರಿಯೆಯಲ್ಲಿ ಅಕ್ರಮದ ಬಗ್ಗೆ ಸಾಕಷ್ಟುಆರೋಪ ಮಾಡಿದ್ದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್ (CID Notice) ನೀಡಿದೆ.

ಪಿಎಸ್ಐ ನೇಮಕ ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದ ಶಾಸಕ ಪ್ರಿಯಾಂಕ್ ಖರ್ಗೆಅವರನ್ನೇ ತನಿಖೆಗೆ ಒಳಪಡಿಸಿ ಎಂದು ಒತ್ತಾಯಿಸುತ್ತಿರುವ ಸಚಿವ ಸುನೀಲ್ ಕುಮಾರ್ ಕಾರ್ಕಳ ಸ್ಥಿತಿ ‘ತಾ ಕಳ್ಳ, ಇತರರ ನಂಬ’ ಎಂಬಂತಾಗಿದೆ.ಈ ಬೆದರಿಕೆಗೆ ನಾವು ಜಗ್ಗುವುದಿಲ್ಲ. ಖರ್ಗೆಯವರ ಬೆನ್ನಹಿಂದೆ ಪಕ್ಷ ಇದೆ. ಸಚಿವ ಸುನೀಲ್ ಕುಮಾರ್ ನೀಡಿದ ಹೇಳಿಕೆಯ ಬೆನ್ನಿನಲ್ಲಿಯೇ ಸಿಐಡಿ ಪೊಲೀಸರು ಅವರ ವಿಚಾರಣೆಗೆ ನೋಟೀಸ್ ನೀಡಿದ್ದನ್ನು ನೋಡಿದರೆ, ನಾಯಕರು ಹಗರಣದ ಬಗ್ಗೆ ಮಾತನಾಡುವವರ ಬಾಯಿಮುಚ್ಚಿಸುವ ಹುನ್ನಾರ ನಡೆಸುತ್ತಿರುವಂತೆ ಕಾಣುತ್ತಿದೆ' ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.