‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ’ ಕಾರ್ಯಕ್ರಮ ಮರು ಆರಂಭ, ಉಡುಪಿಯಲ್ಲಿ ಅಶೋಕ್ ಚಾಲನೆ

ಜಿಲ್ಲಾಡಳಿತವನ್ನು ಹಳ್ಳಿ ಜನರ ಮನೆ ಬಾಗಿಲಿಗೆ ಒಯ್ಯುವ ಉದ್ದೇಶ ಹೊಂದಿರುವ ರಾಜ್ಯ ಸರ್ಕಾರದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ’ ಕಾರ್ಯಕ್ರಮ ಕೋವಿಡ್‌ ಮೂರನೇ ಅಲೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪುನಾರಂಭವಾಗುತ್ತಿದೆ. 

First Published Feb 19, 2022, 3:55 PM IST | Last Updated Feb 19, 2022, 3:55 PM IST

ಜಿಲ್ಲಾಡಳಿತವನ್ನು ಹಳ್ಳಿ ಜನರ ಮನೆ ಬಾಗಿಲಿಗೆ ಒಯ್ಯುವ ಉದ್ದೇಶ ಹೊಂದಿರುವ ರಾಜ್ಯ ಸರ್ಕಾರದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ’ ಕಾರ್ಯಕ್ರಮ ಕೋವಿಡ್‌ ಮೂರನೇ ಅಲೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪುನಾರಂಭವಾಗುತ್ತಿದೆ. ಕಾರ್ಕಳ, ಹೆಬ್ರಿ ಮತ್ತು ಬ್ರಹ್ಮಾವರ ತಾಲೂಕಿನಲ್ಲಿ ಕಂದಾಯ ಮೇಳ ಉದ್ಘಾಟಿಸಿ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಕಂದಾಯ ಸಚಿವ ಅಶೋಕ್‌ ಚಾಲನೆ ನೀಡಿದರು.  ಈ ವೇಳೆ 1000ಕ್ಕೂ ಅಧಿಕ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತುಗಳನ್ನು  ಇಂಧನ ಸಚಿವ ವಿ.ಸುನಿಲ್‌ ಕುಮಾರ್‌ ವಿತರಿಸಿದರು. 

ಡೀಮ್ಡ್ ಫಾರೆಸ್ವ್‌ ಕಾರಣದಿಂದ ತೊಂದರೆಗೊಳಗಾದ ಗ್ರಾಮಸ್ಥರು/ ರೈತರೊಂದಿಗೆ ಸಚಿವರು ಸಂವಾದ ನಡೆಸಿ, ಆಲೂರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಫೆ. 20ರಂದು ಬೆಳಗ್ಗೆ ಕಂಜೂರು ಗ್ರಾಮದ ಕೊರಗ ಸಮುದಾಯದ ಜನರ ಮನೆಯಲ್ಲಿ ಉಪಾಹಾರ ಸೇವನೆ ಮಾಡಿ, ಅವರೊಂದಿಗೆ ಸಮಾಲೋಚನೆ ಮಾಡಲಿದ್ದಾರೆ.

Video Top Stories