ಇಂದು ರಾಹುಲ್‌ಗಾಂಧಿ ರಾಜ್ಯಕ್ಕೆ, ಪಕ್ಷದ ನಾಯ​ಕ​ರೊಂದಿಗೆ ಸರಣಿ ಸಭೆ, ಚುನಾವಣಾ ರಣತಂತ್ರ ತಯಾರಿ

ಕಾಂಗ್ರೆಸ್‌ ವರಿಷ್ಠ ರಾಹುಲ್‌ಗಾಂಧಿ ಎರಡು ದಿನಗಳ ಭೇಟಿಗಾಗಿ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ದೆಹಲಿಯಿಂದ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸುವ ರಾಹುಲ್‌ ಗಾಂಧಿ ಬಳಿಕ ರಸ್ತೆ ಮಾರ್ಗವಾಗಿ ಸಿದ್ಧಗಂಗಾ ಮಠ ತಲುಪಲಿದ್ದಾರೆ. 

First Published Mar 31, 2022, 10:18 AM IST | Last Updated Mar 31, 2022, 10:18 AM IST

ಬೆಂಗಳೂರು (ಮಾ. 31): ಕಾಂಗ್ರೆಸ್‌ ವರಿಷ್ಠ ರಾಹುಲ್‌ಗಾಂಧಿ (Rahul Gandhi) ಎರಡು ದಿನಗಳ ಭೇಟಿಗಾಗಿ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ದೆಹಲಿಯಿಂದ (Delhi) ವಿಮಾನದಲ್ಲಿ ಬೆಂಗಳೂರಿಗೆ (Bengaluru) ಆಗಮಿಸುವ ರಾಹುಲ್‌ ಗಾಂಧಿ ಬಳಿಕ ರಸ್ತೆ ಮಾರ್ಗವಾಗಿ ಸಿದ್ಧಗಂಗಾ ಮಠ (Siddaganga Mutt) ತಲುಪಲಿದ್ದಾರೆ. ಶಿವಕುಮಾರ ಸ್ವಾಮೀಜಿ ಅವರ 105ನೇ ಜಯಂತಿ ಪ್ರಯುಕ್ತ ಗದ್ದುಗೆಗೆ ನಮನ ಸಲ್ಲಿಸಿ ಬಳಿಕ ಸಂಜೆ 6.45ಕ್ಕೆ ಬೆಂಗಳೂರಿನ ಕುಮಾರಕೃಪ ಅತಿಥಿಗೃಹಕ್ಕೆ ವಾಪಸಾಗಲಿದ್ದಾರೆ. ಗುರುವಾರ ಸಂಜೆ ಹಾಗೂ ಶುಕ್ರವಾರ ಎರಡೂ ದಿನ ಪಕ್ಷದ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

ಏ.1 ರಂದು ಬೆಳಗ್ಗೆ 10.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಕಾರಿ ಸಮಿತಿ ಉದ್ದೇಶಿಸಿ ರಾಹು​ಲ್‌ ಮಾತನಾಡಲಿದ್ದಾರೆ. ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್‌, ರಣದೀಪ್‌ಸಿಂಗ್‌ ಸುರ್ಜೇವಾಲ, ಕೆಪಿ​ಸಿಸಿ ಅಧ್ಯ​ಕ್ಷ ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಸೇರಿ ಹಲವರು ಭಾಗವಹಿಸಲಿದ್ದಾರೆ. ಈ ವೇಳೆ ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆ ಹಾಗೂ ಮುಂದಿನ ಚುನಾವಣಾ ಸಿದ್ಧತೆಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆಯಿದೆ.