ರಾಹುಲ್​ ಮತ ಕಳವು ಆರೋಪ, ರಾಜಕೀಯ ಯುದ್ಧ, ಬೆಂಗಳೂರು ಗ್ರಾಮಾಂತರದಲ್ಲಿ ಗೋಲ್‌ಮಾಲ್‌ ಎಂದ ಡಿಕೆ!

ರಾಹುಲ್ ಗಾಂಧಿ ಅವರ ಚುನಾವಣಾ ಅಕ್ರಮ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಸೆಂಟ್ರಲ್ ಮತ್ತು ಗ್ರಾಮಾಂತರ ಕ್ಷೇತ್ರಗಳಲ್ಲಿ ಅಕ್ರಮ ನಡೆದಿದೆ ಎಂದು ಇಬ್ಬರೂ ಹೇಳಿದ್ದಾರೆ. ಡಿಕೆ ಶಿವಕುಮಾರ್ ತಾವೇ ತನಿಖೆ ನಡೆಸಿರುವುದಾಗಿ ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಜು.26): ಕರ್ನಾಟಕದ ಚುನಾವಣೆಯಲ್ಲೂ ಅಕ್ರಮವಾಗಿ ಎಂದು ರಾಹುಲ್‌ ಗಾಂಧಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಇಬ್ಬರೂ ಸಾಥ್‌ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಗಳೂರು ಸೆಂಟ್ರಲ್‌ನಲ್ಲಿ ಚುನಾವಣೆ ಅಕ್ರಮ ನಡೆದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಕ್ಕದೆ, ವಿಧಾನಸಭೆ ಹೇಗೆ ಗೆಲುವು ಸಾಧಿಸಿದ್ದೀರಿ ಎಂದು BJP ನಾಯಕರು ಪ್ರಶ್ನೆ ಮಾಡಿದ್ದಾರೆ.

ಇನ್ನು ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪ ನಿಜ.ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲೂ ಗೋಲ್ಮಾಲ್ ಆಗಿದೆ. ನಾನು ರಾಹುಲ್ ಗಾಂಧಿ ಹೇಳಿಕೆಯನ್ನು ಒಪ್ಪುತ್ತೇನೆ. ನಾನೂ ಬೆಂಗಳೂರು ಗ್ರಾಮಾಂತರದಲ್ಲಿ ತನಿಖೆ ನಡೆಸಿದ್ದೇನೆ. ಇಲ್ಲಿ ಅನೇಕ ಗೋಲ್ಮಾಲ್ ಗಳು ನಡೆದಿವೆ. ಸದ್ಯಕ್ಕೆ ನಾನು ಹೆಚ್ಚು ವಿಚಾರ ಪ್ರಸ್ತಾಪ ಮಾಡುವುದಿಲ್ಲ. ಮುಂದೆ ಈ ವಿಚಾರವಾಗಿ ಮಾತನಾಡುತ್ತೇನೆ ಎಂದಿದ್ದಾರೆ.

Related Video