
CD Scandal: ತನಿಖಾ ವರದಿ ಸಲ್ಲಿಸಲು SITಗೆ ಹೈಕೋರ್ಟ್ ಅನುಮತಿ, ರಮೇಶ್ ಜಾರಕಿಹೊಳಿಗೆ ಆತಂಕ!
ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಸಿ.ಡಿ. ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ, ಅಂತಿಮ ತನಿಖಾ ವರದಿ ಸಲ್ಲಿಸಲು ತನಿಖಾ ತಂಡ ಎಸ್ಐಟಿಗೆ ಹೈಕೋರ್ಟ್ (High Court) ಅನುಮತಿ ನೀಡಿದೆ. ಸಕ್ಷಮ ಮ್ಯಾಜಿಸ್ಟ್ರೇಟ್ ಮುಂದೆ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ವಿಭಾಗೀಯ ಪೀಠವು ಅನುಮತಿ ನೀಡಿದ್ದು, ಅರ್ಜಿದಾರರು ಎತ್ತಿರುವ ಪ್ರಶ್ನೆಗಳನ್ನು ಮುಕ್ತವಾಗಿರಿಸಿದೆ.
ಬೆಂಗಳೂರು(ಫೆ.03): ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಸಿ.ಡಿ. ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ, ಅಂತಿಮ ತನಿಖಾ ವರದಿ ಸಲ್ಲಿಸಲು ತನಿಖಾ ತಂಡ ಎಸ್ಐಟಿಗೆ ಹೈಕೋರ್ಟ್ (High Court) ಅನುಮತಿ ನೀಡಿದೆ. ಸಕ್ಷಮ ಮ್ಯಾಜಿಸ್ಟ್ರೇಟ್ ಮುಂದೆ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ವಿಭಾಗೀಯ ಪೀಠವು ಅನುಮತಿ ನೀಡಿದ್ದು, ಅರ್ಜಿದಾರರು ಎತ್ತಿರುವ ಪ್ರಶ್ನೆಗಳನ್ನು ಮುಕ್ತವಾಗಿರಿಸಿದೆ.
ಲೈಂಗಿಕ ದೌರ್ಜನ್ಯ ಆರೋಪದಿಂದ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸದ್ಯದಲ್ಲೇ ಅವರ ಭವಿಷ್ಯ ತೀರ್ಮಾನವಾಗಲಿದೆ. ಇದೀಗ ತನಿಖೆ ಮುಕ್ತಾಯವಾಗಿದ್ದು, ವರದಿ ಸಲ್ಲಿಕೆಯಾಗಲಿದೆ. ಪೊಲೀಸರ ಅಂತಿಮ ವರದಿಯಲ್ಲಿ ರಮೇಶ್ ಜಾರಕಿಹೊಳಿ ಭವಿಷ್ಯ ಇದೆ. ಯುವತಿಯ ಆರೋಪ ಸಾಬೀತಾಗದಿದ್ದರೆ ಬಿ ರಿಪೋರ್ಟ್ ಸಲ್ಲಿಕೆಯಾಗುತ್ತದೆ. ಸಿ ರಿಪೋರ್ಟ್ ಸಲ್ಲಿಸಿದರೆ ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗುತ್ತಾರೆ. ಚಾರ್ಜ್‌ಶೀಟ್ ಸಲ್ಲಿಸಿದರೆ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಲಿದೆ. ಹೀಗಾಗಿ ಸದ್ಯಕ್ಕೆ ಅಂತಿಮ ವರದಿಯು ರಮೇಶ್ ಭವಿಷ್ಯವನ್ನು ತೀರ್ಮಾನಿಸುತ್ತದೆ.