ಸಿದ್ದು ರೆಸಾರ್ಟ್ ಪಾಲಿಟಿಕ್ಸ್, ಡಿಕೆಶಿ ಟ್ಯಾಕ್ಸಿಕ್ಸ್, ನೋ ವರ್ಕೌಟ್! ಸೋತಿದ್ದೆಲ್ಲಿ ಕಾಂಗ್ರೆಸ್.?

ಮೂರೂ ಮಹಾನಗರ ಪಾಲಿಕೆಗಳಲ್ಲಿ ಅಧಿಕಾರ ಹಿಡಿಯುವಲ್ಲಿ ಬಿಜೆಪಿ ಸ್ಪಷ್ಟ ಮುನ್ನಡೆ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಮಲ ಕಮಾಲ್‌ ಮಾಡಿದೆ. 

First Published Sep 7, 2021, 3:40 PM IST | Last Updated Sep 7, 2021, 4:06 PM IST

ಬೆಂಗಳೂರು (ಸೆ.07): ಮೂರೂ ಮಹಾನಗರ ಪಾಲಿಕೆಗಳಲ್ಲಿ ಅಧಿಕಾರ ಹಿಡಿಯುವಲ್ಲಿ ಬಿಜೆಪಿ ಸ್ಪಷ್ಟ ಮುನ್ನಡೆ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಮಲ ಕಮಾಲ್‌ ಮಾಡಿದೆ. ಕುಂದಾನಗರಿ ಬೆಳಗಾವಿಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ್ದರೆ, ಹುಬ್ಬಳ್ಳಿ-ಧಾರವಾಡದಲ್ಲಿ ಮೂರನೇ ಬಾರಿ ಗದ್ದುಗೆ ಹಿಡಿಯುವುದು ಪಕ್ಕಾ ಆಗಿದೆ. ಇನ್ನು ಅತಂತ್ರ ಪರಿಸ್ಥಿತಿ ಏರ್ಪಟ್ಟಿರುವ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ತೆರೆಮರೆಯ ಪ್ರಯತ್ನ ನಡೆಸುತ್ತಿದೆ.

ಬಿಎಸ್‌ವೈ ಸಾಧನೆ, ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ: ಅರುಣ್ ಸಿಂಗ್

ಮೂರು ಮಹಾನಗರ ಪಾಲಿಕೆ ಚುನಾವಣೆಯನ್ನು ರಾಜ್ಯ ಕಾಂಗ್ರೆಸ್‌ ನಾಯಕತ್ವ ಗಂಭೀರವಾಗಿಯೇ ಪರಿಗಣಿಸಿರಲಿಲ್ಲ. ಚುನಾವಣೆಯ ಅಷ್ಟುಹೊಣೆಯನ್ನು ಸ್ಥಳೀಯ ನಾಯಕತ್ವಕ್ಕೆ ಬಿಟ್ಟಿದ್ದ ಕಾಂಗ್ರೆಸ್‌ಗೆ ತಕ್ಕಂತಹ ಫಲಿತಾಂಶವೇ ಬಂದಿದೆ. ಹಾಗಾದರೆ ಕಾಂಗ್ರೆಸ್ ಎಡವಿದ್ದೆಲ್ಲಿ..? ಬಿಜೆಪಿಗೆ ಪ್ಲಸ್ ಪಾಯಿಂಟ್ ಯಾವುದು.? ಈ ಚುನಾವಣೆ ಕೊಟ್ಟ ಸಂದೇಶವೇನು.?