Flag Row: ಈಶ್ವರಪ್ಪ ರಾಜೀನಾಮೆ ಬೇಡ, ಅವರನ್ನು ವಜಾ ಮಾಡ್ಬೇಕು: ಡಿಕೆಶಿ

ಹರಕುಬಾಯಿ ಈಶ್ವರಪ್ಪ (KS Eshwarappa) ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ನನ್ನ ಬಗ್ಗೆ ಮಾತ್ರವಲ್ಲದೆ ನಮ್ಮ ತಂದೆಯವರ ಬಗ್ಗೆ ಮಾತನಾಡಿದ್ದಾರೆ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಆತ ಮೊದಲು ಸಚಿವ ಸ್ಥಾನದಿಂದ ಕೆಳಗೆ ಇಳಿಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಒತ್ತಾಯಿಸಿದ್ದಾರೆ.

First Published Feb 18, 2022, 10:53 AM IST | Last Updated Feb 18, 2022, 11:04 AM IST

ಬೆಂಗಳೂರು (ಫೆ. 18): ಹರಕುಬಾಯಿ ಈಶ್ವರಪ್ಪ (KS Eshwarappa) ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ನನ್ನ ಬಗ್ಗೆ ಮಾತ್ರವಲ್ಲದೆ ನಮ್ಮ ತಂದೆಯವರ ಬಗ್ಗೆ ಮಾತನಾಡಿದ್ದಾರೆ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಆತ ಮೊದಲು ಸಚಿವ ಸ್ಥಾನದಿಂದ ಕೆಳಗೆ ಇಳಿಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಒತ್ತಾಯಿಸಿದ್ದಾರೆ.

Flag Row: ಈಶ್ವರಪ್ಪ ವಜಾಕ್ಕೆ ಕಾಂಗ್ರೆಸ್ ಅಹೋರಾತ್ರಿ ಧರಣಿ, ಇದಕ್ಕೆಲ್ಲಾ ಬಗ್ಗಲ್ಲ ಎಂದ ಈಶ್ವರಪ್ಪ

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಸಚಿವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ದೇಶ ಒಡೆಯುವ ಹೇಳಿಕೆ ಸಮರ್ಥಿಸಿಕೊಳ್ಳುತ್ತಿರುವ ಸರ್ಕಾರದ ಕ್ರಮ ಖಂಡಿಸಿ ಅಹೋರಾತ್ರಿ ಧರಣಿ ನಡೆಸುತ್ತಿದ್ದೇವೆ. ಸಚಿವ ಈಶ್ವರಪ್ಪ ಅವರನ್ನು ವಜಾಗೊಳಿಸಿ ದೇಶದ್ರೋಹ ಪ್ರಕರಣ ದಾಖಲಿಸುವವರೆಗೂ ಹೋರಾಟದಿಂದ ಹಿಂದೆ ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.