ಲಾಕ್‍ಡೌನ್ ಅನಿವಾರ್ಯ, ಈ ಬಗ್ಗೆ ನಿರಂತರವಾಗಿ ನಡೀತಿದೆ ಸಭೆ: ಸುಳಿವು ಕೊಟ್ಟ ಅಶೋಕ್
ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಎಸ್‌ಎಸ್‌ಲ್‌ಸಿ ಪರೀಕ್ಷೆ ಮುಗಿದ ನಂತರ ಮತ್ತೆ ಲಾಕ್‍ಡೌನ್ ಜಾರಿ ಮಾಡುವ ಸುಳಿವನ್ನು ಸರ್ಕಾರ ನೀಡಿದೆ.
ಬೆಂಗಳೂರು, (ಜೂ.30): ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಎಸ್‌ಎಸ್‌ಲ್‌ಸಿ ಪರೀಕ್ಷೆ ಮುಗಿದ ನಂತರ ಮತ್ತೆ ಲಾಕ್‍ಡೌನ್ ಜಾರಿ ಮಾಡುವ ಸುಳಿವನ್ನು ಸರ್ಕಾರ ನೀಡಿದೆ.
ಜುಲೈ, ಆಗಸ್ಟಲ್ಲಿ ಮಹಾಸ್ಫೋಟ; ವಾರಕ್ಕೆ 2 ದಿನ ಲಾಕ್‌ಡೌನ್?: 6 ತಿಂಗಳು ಇದೇ ಸ್ಥಿತಿ
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಕಂದಾಯ ಸಚಿವ ಹಾಗೂ ಕೋವಿಡ್ ಉಸ್ತುವಾರಿ ಆರ್.ಅಶೋಕ್, ಕೊರೋನಾ ವೇಗಕ್ಕೆ ಕಡಿವಾಣ ಹಾಕಬೇಕಾದರೆ ಲಾಕ್‍ಡೌನ್ ಅನಿವಾರ್ಯ ಎಂದು ಪರೋಕ್ಷವಾಗಿ ಮತ್ತೆ ಲಾಕ್‍ಡೌನ್ ಮಾಡುವ ಸುಳಿವು ಕೊಟ್ಟರು.