ಪಠ್ಯದ ಬಗ್ಗೆ ಬರಗೂರು ಒಪ್ಪಿದರೆ ಮುಖಾಮುಖಿ ಚರ್ಚೆಗೆ ಸಿದ್ಧ: ಸಚಿವ ನಾಗೇಶ್

ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ (Baruguru Ramachandrappa) ಅವರ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ಮಾಡಿದ ಹಲವು ಬದಲಾವಣೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌, (BC Nagesh) ಈ ಸಂಬಂಧ ಡಾ.ಬರಗೂರು ರಾಮಚಂದ್ರಪ್ಪ ಅವರು ಇಚ್ಛಿಸಿದರೆ ಮುಖಾಮುಖಿ ಚರ್ಚೆಗೆ ಸಿದ್ಧ ಎಂದು ಹೇಳಿದ್ದಾರೆ.
 

First Published May 25, 2022, 10:15 AM IST | Last Updated May 25, 2022, 11:02 AM IST

ಬೆಂಗಳೂರು (ಮೇ. 25): ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ (Baruguru Ramachandrappa) ಅವರ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ಮಾಡಿದ ಹಲವು ಬದಲಾವಣೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌, (BC Nagesh) ಈ ಸಂಬಂಧ ಡಾ.ಬರಗೂರು ರಾಮಚಂದ್ರಪ್ಪ ಅವರು ಇಚ್ಛಿಸಿದರೆ ಮುಖಾಮುಖಿ ಚರ್ಚೆಗೆ ಸಿದ್ಧ ಎಂದು ಹೇಳಿದ್ದಾರೆ.

News Hour ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ, ಶಿಕ್ಷಣ ಸಚಿವರ ಖಡಕ್ ಉತ್ತರ

ರೋಹಿತ್‌ ಚಕ್ರತೀರ್ಥ ಅವರ ನೇತೃತ್ವದ ಸಮಿತಿ ಮಾಡಿರುವ ಪಠ್ಯಪರಿಷ್ಕರಣೆ ಬಗ್ಗೆ ಪ್ರಶ್ನಿಸಿ ವಿವಾದ ಸೃಷ್ಟಿಸುತ್ತಿರುವವರು, ಬರಗೂರು ರಾಮಚಂದ್ರಪ್ಪ ಅವರ ಸಮಿತಿ ಕುವೆಂಪು, ಗಾಂಧಿ, ಅಂಬೇಡ್ಕರ್‌ ಅವರ ಪಠ್ಯಗಳನ್ನು ತೆಗೆದುಹಾಕಿದರೂ ಏಕೆ ಪ್ರಶ್ನಿಸಲಿಲ್ಲ? ಸಿಂಧೂ ಸಂಸ್ಕೃತಿ ಪಾಠ ತೆಗೆದು ಜವಾಹರಲಾಲ್‌ ನೆಹರು ಅವರು ಇಂದಿರಾಗಾಂಧಿ ಅವರಿಗೆ ಬರೆದಿರುವ ಪತ್ರವನ್ನು ಸೇರ್ಪಡೆ ಮಾಡಲಾಗಿತ್ತು. ಅಪ್ಪ ಮಗಳಿಗೆ ಬರೆದಿರುವ ಪಾಠವನ್ನು ನಮ್ಮ ಮಕ್ಕಳು ಏಕೆ ಓದಬೇಕು? ಆ ಸಮಿತಿ ಮಾಡಿದ್ದೆಲ್ಲವೂ ಸರಿಯಾಗಿತ್ತಾ ಎಂದು ಪ್ರಶ್ನಿಸಿದ್ದಾರೆ. 

ಪಠ್ಯ ಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ವಾದಕ್ಕೆ ಇಳಿಯುವ ಬದಲು ವಿವಾದವನ್ನು ಬಗೆಹರಿಸಿ ಶೈಕ್ಷಣಿಕ ಕ್ಷೇತ್ರದ ಘನತೆಯನ್ನು ಕಾಪಾಡಲಿ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಒತ್ತಾಯಿಸಿದ್ದಾರೆ.