ರಿಕ್ಷಾ, ಬಸ್‌ ಚಾಲಕರು ಆಕಸ್ಮಿಕವಾಗಿ ಮೃತಪಟ್ಟರೆ 5 ಲಕ್ಷ ರೂ ಪರಿಹಾರ: ಸಚಿವ ಹೆಬ್ಬಾರ್‌

ಆಟೋ ರಿಕ್ಷಾ, ಬಸ್‌ ಚಾಲಕರು ಮತ್ತು ಕಾರ್ಮಿಕ ಇಲಾಖೆ ವ್ಯಾಪ್ತಿಯ ತಾಂತ್ರಿಕ ಸಿಬ್ಬಂದಿ ಆಕಸ್ಮಿಕವಾಗಿ ಸಾವನ್ನಪ್ಪಿದರೆ ಕಾರ್ಮಿಕ ಇಲಾಖೆಯಿಂದ ಐದು ಲಕ್ಷ ರು. ಪರಿಹಾರ ನೀಡುವ ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌ ಹೇಳಿದ್ದಾರೆ.

First Published Aug 14, 2021, 10:44 AM IST | Last Updated Aug 14, 2021, 10:44 AM IST

ಬೆಂಗಳೂರು (ಆ. 14): ಆಟೋ ರಿಕ್ಷಾ, ಬಸ್‌ ಚಾಲಕರು ಮತ್ತು ಕಾರ್ಮಿಕ ಇಲಾಖೆ ವ್ಯಾಪ್ತಿಯ ತಾಂತ್ರಿಕ ಸಿಬ್ಬಂದಿ ಆಕಸ್ಮಿಕವಾಗಿ ಸಾವನ್ನಪ್ಪಿದರೆ ಕಾರ್ಮಿಕ ಇಲಾಖೆಯಿಂದ ಐದು ಲಕ್ಷ ರು. ಪರಿಹಾರ ನೀಡುವ ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌ ಹೇಳಿದ್ದಾರೆ.

 ಒಂದು ಕಾಲದಲ್ಲಿ ನಾನೇ ಚಾಲಕನಾಗಿ ಕೆಲಸ ಮಾಡಿದ್ದೇನೆ. ಕಾರ್ಮಿಕರ ಕಷ್ಟಗಳೇನು ಎಂಬುದು ನನಗೆ ಗೊತ್ತಿದೆ. ಹೀಗಾಗಿ ಕಾರ್ಮಿಕರು ಮೃತಪಟ್ಟರೆ ಐದು ಲಕ್ಷ ರು. ಪರಿಹಾರ ನೀಡುವ ಹೊಸ ಕಾರ್ಯಕ್ರಮವನ್ನು ರೂಪಿಸಲು ಮುಂದಾಗಿದ್ದೇನೆ. ಈಗಾಗಲೇ ಇಲಾಖೆಯಲ್ಲಿ ರೂಪರೇಷೆಗಳನ್ನು ಸಿದ್ಧಪಡಿಸಲಾಗಿದೆ. ಇದರಿಂದ ಕಾರ್ಮಿಕ ವರ್ಗಕ್ಕೆ ಬಹುದೊಡ್ಡ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

Video Top Stories