ಅಮೆರಿಕ ಪ್ರಜೆಯಾಗಿದ್ದರೂ ಭಾರತದ ಹೋರಾಟಗಳಲ್ಲಿ ಭಾಗಿ, ನಟ ಚೇತನ್ ಗಡೀಪಾರು ಸಾಧ್ಯತೆ
ಸದಾ ಒಂದಿಲ್ಲೊಂದು ವಿವಾದಗಳಿಗೆ ತುತ್ತಾಗುವ ಕನ್ನಡ ಚಲನಚಿತ್ರ ನಟ ಹಾಗೂ ಅಮೆರಿಕ ಪ್ರಜೆ ಚೇತನ್ ಅವರಿಗೆ ಮತ್ತೆ ಸಂಕಷ್ಟಎದುರಾಗಿದ್ದು, ಈಗ ಸಾಗರೋತ್ತರ ಭಾರತೀಯ ನಾಗರಿಕ ಪತ್ರ (ಓಸಿಎ) ನಿಯಮಗಳನ್ನು ಉಲ್ಲಂಘನೆ ಮಾಡಿದ ಸಂಬಂಧ ನಟನ ವಿರುದ್ಧ ರಾಜ್ಯ ಸರ್ಕಾರಕ್ಕೆ ಬೆಂಗಳೂರು ಪೊಲೀಸರು ವರದಿ ಸಲ್ಲಿಸಿದ್ದಾರೆ.
ಬೆಂಗಳೂರು (ಮಾ. 12): ಸದಾ ಒಂದಿಲ್ಲೊಂದು ವಿವಾದಗಳಿಗೆ ತುತ್ತಾಗುವ ಕನ್ನಡ ಚಲನಚಿತ್ರ ನಟ ಹಾಗೂ ಅಮೆರಿಕ ಪ್ರಜೆ ಚೇತನ್ ಅವರಿಗೆ ಮತ್ತೆ ಸಂಕಷ್ಟಎದುರಾಗಿದ್ದು, ಈಗ ಸಾಗರೋತ್ತರ ಭಾರತೀಯ ನಾಗರಿಕ ಪತ್ರ (ಓಸಿಎ) ನಿಯಮಗಳನ್ನು ಉಲ್ಲಂಘನೆ ಮಾಡಿದ ಸಂಬಂಧ ನಟನ ವಿರುದ್ಧ ರಾಜ್ಯ ಸರ್ಕಾರಕ್ಕೆ ಬೆಂಗಳೂರು ಪೊಲೀಸರು ವರದಿ ಸಲ್ಲಿಸಿದ್ದಾರೆ.
ವಿದೇಶಿ ಪ್ರಜೆಗಳು ಭಾರತದಲ್ಲಿನ ಹೋರಾಟದಲ್ಲಿ ಪಾಲ್ಗೊಳ್ಳುವಂತಿಲ್ಲ. ಆದರೆ ಚೇತನ್ ಅನೇಕ ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ಸರ್ಕಾರವು ಈ ಬಗ್ಗೆ ವರದಿಯನ್ನು ಕೇಂದ್ರ ಸರ್ಕಾರದ ವಿದೇಶಾಂಗ ಇಲಾಖೆಗೆ ರವಾನಿಸಲಿದೆ. ಅಂತಿಮವಾಗಿ ರಾಜ್ಯ ಸರ್ಕಾರದ ವರದಿ ಆಧರಿಸಿ ಚೇತನ್ ಅವರನ್ನು ಗಡೀಪಾರಿಗೆ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಓಸಿಎ ನಿಯಮದ ಪ್ರಕಾರ ರಾಜಕೀಯ ಚಟುವಟಿಕೆಗಳು ಹಾಗೂ ಸಾರ್ವಜನಿಕ ಪ್ರತಿಭಟನೆಗಳಲ್ಲಿ ಸಾಗರೋತ್ತರ ನಾಗರಿಕರು ಪಾಲ್ಗೊಳ್ಳುವಂತಿಲ್ಲ. ಆದರೆ ಅಮೆರಿಕ ಪ್ರಜೆಯಾಗಿದ್ದರೂ ಚೇತನ್ ಅವರು ಪ್ರತಿಭಟನೆಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಹಲವು ಬಾರಿ ರಾಜಕೀಯ ವಿಚಾರಗಳಲ್ಲಿ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.