Asianet Suvarna News Asianet Suvarna News

ಸಂತೋಷ್ ಆತ್ಮಹತ್ಯೆ ಕೇಸ್: ಈಶ್ವರಪ್ಪ ರಾಜೀನಾಮೆ ಇಂದು ಬಹುತೇಕ ಖಚಿತ

 ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪಗೆ ಸುತ್ತಿಕೊಂಡಿದೆ. ಮೈಸೂರಿನಿಂದ ಶಿವಮೊಗ್ಗಕ್ಕೆ ತೆರಳಿ, ಅಲ್ಲಿ ಸುದ್ದಿಗೋಷ್ಠಿ ನಡೆಸಿ ಇಂದೇ ರಾಜೀನಾಮೆ ಕೊಡುವ ಸಾಧ್ಯತೆ ಇದೆ. 

First Published Apr 13, 2022, 11:58 AM IST | Last Updated Apr 13, 2022, 11:58 AM IST

ಬೆಂಗಳೂರು (ಏ. 13):  ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪಗೆ ಸುತ್ತಿಕೊಂಡಿದೆ. ಮೈಸೂರಿನಿಂದ ಶಿವಮೊಗ್ಗಕ್ಕೆ ತೆರಳಿ, ಅಲ್ಲಿ ಸುದ್ದಿಗೋಷ್ಠಿ ನಡೆಸಿ ಇಂದೇ ರಾಜೀನಾಮೆ ಕೊಡುವ ಸಾಧ್ಯತೆ ಇದೆ. 

ಸಂತೋಷ್ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ವಿರುದ್ಧ FIR ದಾಖಲು

ರಸ್ತೆ ಕಾಮಗಾರಿ ಹಣ ಬಿಡುಗಡೆ ಆಗಿಲ್ಲದ್ದಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೆಸರನ್ನು ಬರೆದಿಟ್ಟು ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಶ್ವರಪ್ಪ ಪರ ನಿಂತಿದ್ದು, ಸಂತೋಷ್‌ ಆತ್ಮಹತ್ಯೆ ಏಕೆ ಮಾಡಿಕೊಂಡರು ಎಂಬುದು ತನಿಖೆಯಿಂದ ಪತ್ತೆಯಾಗಬೇಕಿದೆ. ತಮ್ಮ ವಿರುದ್ಧದ ಆರೋಪಗಳಿಗೆ ಈಗಾಗಲೇ ಈಶ್ವರಪ್ಪ ಅವರು ನ್ಯಾಯಾಲಯದಲ್ಲಿ ಮಾನನಷ್ಟಮೊಕದ್ದಮೆ ಹಾಕಿದ್ದಾರೆ.