ಕೊರೋನಾ ಕಾಟ: 8 ಜಿಲ್ಲೆಗಳಲ್ಲಿ ಮತ್ತೊಂದು ವಾರ ಲಾಕ್‌ಡೌನ್‌

 * ರಾಜ್ಯದಲ್ಲಿ ಹಂತ ಹಂತವಾಗಿ ಅನ್‌ಲಾಕ್‌ ಮಾಡಲು ನಿರ್ಧಾರ
* ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ವಿಸ್ತರಣೆ 
* ರಾಜ್ಯದಲ್ಲಿ ಕಡಿಮೆಯಾಗುತ್ತಿರುವ ಕೊರೋನಾ ಪ್ರಕರಣಗಳು
 

First Published Jun 10, 2021, 3:39 PM IST | Last Updated Jun 10, 2021, 3:43 PM IST

ಬೆಂಗಳೂರು(ಜೂ.10): ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿವೆ. ಹೀಗಾಗಿ ರಾಜ್ಯದಲ್ಲಿ ಹಂತ ಹಂತವಾಗಿ ಅನ್‌ಲಾಕ್‌ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಸೋಂಕು ಹೆಚ್ಚಿರುವ ಶಿವಮೊಗ್ಗ, ತುಮಕೂರು, ಮೈಸೂರು, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ಬೆಳಗಾವಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅನ್‌ಲಾಕ್‌ ಭಾಗ್ಯ ಇರೋದಿಲ್ಲ. ಶೇ. 5ಕ್ಕಿಂತ ಪಾಸಿಟಿವಿಟ್‌ ರೇಟ್‌ ಇರುವ ಈ 8 ಜಿಲ್ಲೆಗಳಲ್ಲಿ ಲಾಕ್‌ಡೌನ್‌ ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿದೆ. 

BBMPಯಿಂದ 3 ನೆ ಅಲೆ ತಡೆಗೆ ಮಕ್ಕಳ ತಜ್ಞರಿಗೆ ತರಬೇತಿ

Video Top Stories