Asianet Suvarna News Asianet Suvarna News

ಪೊಲೀಸ್ ಇಲಾಖೆಗೂ ಬಿಬಿಎಂಪಿ ಮೇಲೆ ನಂಬಿಕೆ ಇಲ್ವಾ?

ಈ ಹಿಂದೆಯೇ ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಲವು ಕೊರೋನಾ ವಾರಿಯರ್ಸ್‌ಗಳು ತಮ್ಮ ಪ್ರಾಣ ತ್ಯಾಗ ಮಾಡಿದ್ದರು. ಇದೀಗ ಎಚ್ಚೆತ್ತುಕೊಂಡ ಗೃಹ ಇಲಾಖೆ ತಮ್ಮ ಸಿಬ್ಬಂದಿಗಳ ರಕ್ಷಣೆಗೆ ಮುಂದಾಗಿದೆ. ಈ ಕುರಿತಂತೆ ಪ್ರತಿದಿನ ಪೊಲೀಸ್ ಠಾಣೆ ಸಿಬ್ಬಂದಿ ಮಾನಿಟರಿಂಗ್ ಮಾಡುತ್ತಾರೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಎಲ್ಲಾ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
 

ಬೆಂಗಳೂರು(ಜು.18): ಬಿಬಿಎಂಪಿ ಸಹಾಯ ಪಡೆಯದೇ ಪೊಲೀಸ್ ಇಲಾಖೆ ತಮ್ಮ ಸಿಬ್ಬಂದಿಯ ಆರೋಗ್ಯ ರಕ್ಷಣೆಗೆ ಮುಂದಾಗಿದೆ. ಬೆಂಗಳೂರಿನಲ್ಲಿರುವ ಎಲ್ಲಾ ವಿಭಾಗದಲ್ಲಿರುವ ಪೊಲೀಸರಿಗೆ ಪ್ರತ್ಯೇಕ ಆಸ್ಪತ್ರೆ ಹಾಗೂ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿಕೊಂಡಿದೆ.

ಹೌದು, ಈ ಹಿಂದೆಯೇ ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಲವು ಕೊರೋನಾ ವಾರಿಯರ್ಸ್‌ಗಳು ತಮ್ಮ ಪ್ರಾಣ ತ್ಯಾಗ ಮಾಡಿದ್ದರು. ಇದೀಗ ಎಚ್ಚೆತ್ತುಕೊಂಡ ಗೃಹ ಇಲಾಖೆ ತಮ್ಮ ಸಿಬ್ಬಂದಿಗಳ ರಕ್ಷಣೆಗೆ ಮುಂದಾಗಿದೆ. ಈ ಕುರಿತಂತೆ ಪ್ರತಿದಿನ ಪೊಲೀಸ್ ಠಾಣೆ ಸಿಬ್ಬಂದಿ ಮಾನಿಟರಿಂಗ್ ಮಾಡುತ್ತಾರೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಎಲ್ಲಾ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ವಿಜಯಪುರ: ಕೊರೋನಾ ಬಗ್ಗೆ ಡೋಂಟ್‌ ಕೇರ್‌, ಕೂಡಗಿ ತಾಂಡಾದಲ್ಲಿ ಭರ್ಜರಿ ಜಾತ್ರೆ..!

ಆಸ್ಪತ್ರೆಗಳಲ್ಲಿ ಪೊಲೀಸರಿಗೆ ಉತ್ತಮ ಆಹಾರ ನೀಡುವುದಕ್ಕೂ ಸರಿಯಾದ ವ್ಯವಸ್ಥೆಯಾಗಿದೆ. ಬೆಂಗಳೂರಿನಲ್ಲಿರುವ ಪೊಲೀಸರಿಗೆ 5 ಪ್ರತ್ಯೇಕ ಆಸ್ಪತ್ರೆಗಳನ್ನು ಮೀಸಲಿಡಲಾಗಿದೆ. ವಿಕ್ರಂ ಆಸ್ಪತ್ರೆ, ಎಂ. ಎಸ್. ರಾಮಯ್ಯ ಆಸ್ಪತ್ರೆ ಸೇರಿದಂತೆ 5 ಆಸ್ಪತ್ರೆಗಳನ್ನು ಮೀಸಲಿಡಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.