Asianet Suvarna News Asianet Suvarna News

ಪ್ರತ್ಯೇಕ ಲಿಂಗಾಯತ ಹೋರಾಟದ ಬಗ್ಗೆ ನೋ ಕಮೆಂಟ್ಸ್ ಎಂದು ಜಾರಿಕೊಂಡ ಸಿದ್ದರಾಮಯ್ಯ

Sep 2, 2021, 5:25 PM IST

ಬೆಂಗಳೂರು (ಸೆ. 02): ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅಂತರ ಕಾಯ್ದುಕೊಂಡಿದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ಬಗ್ಗೆ ನನಗೆ ಗೊತ್ತಿಲ್ಲ. ಎಂ ಬಿ ಪಾಟೀಲ್ ಹೇಳಿದ್ರೆ ಅವರನ್ನೇ ಕೇಳಿ ಎಂದಿದ್ದಾರೆ ಸಿದ್ದರಾಮಯ್ಯ. 

ಅಚ್ಚೇ ದಿನ್ ಎಂದು ಬೆಲೆ ಏರಿಕೆ ಮಾಡಿರುವುದೇ ಬಿಜೆಪಿ ಸಾಧನೆ: ಸಿದ್ದರಾಮಯ್ಯ ಆಕ್ರೋಶ

ಸಿದ್ದರಾಮಯ್ಯ ಸರ್ಕಾರವಿದ್ದಾಗ ಪ್ರತ್ಯೇಕ ಲಿಂಗಾಯತ ಧರ್ಮ ಸಮಿತಿ ರಚನೆಯಾಗಿತ್ತು. ಎಂ ಬಿ ಪಾಟೀಲ್ ನೇತೃತ್ವದಲ್ಲಿ ಹೋರಾಟ ಶುರುವಾಗಿತ್ತು. ಇದೀಗ ಎಂಬಿಪಿ ಮೇಲೆ ಹಾಕಿ ಸಿದ್ದರಾಮಯ್ಯ ಜಾರಿಕೊಂಡಿದ್ದಾರೆ.