Asianet Suvarna News Asianet Suvarna News

ಮಂಗಳೂರು ಖ್ಯಾತ ವಕೀಲನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಸಂತ್ರಸ್ತೆ ಜೊತೆಗಿನ ಆಡಿಯೋ ವೈರಲ್

ಮಂಗಳೂರಿನ ಖ್ಯಾತ ವಕೀಲ ಕೆಎಸ್‌ಎನ್ ರಾಜೇಶ್ ಭಟ್ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಾಗಿದೆ. ತಮ್ಮ ಕಚೇರಿಯಲ್ಲಿ ಇಂಟರ್ನಿಯಾಗಿ ಕೆಲಸ ಮಾಡುತ್ತಿದ್ದ ಜ್ಯೂನಿಯರ್ ವಿದ್ಯಾರ್ಥಿನಿಯಾಗಿ ಕೆಲಸ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು (ಅ. 19): ಮಂಗಳೂರಿನ ಖ್ಯಾತ ವಕೀಲ ಕೆಎಸ್‌ಎನ್ ರಾಜೇಶ್ ಭಟ್ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಾಗಿದೆ.

ತಮ್ಮ ಕಚೇರಿಯಲ್ಲಿ ಇಂಟರ್ನಿಯಾಗಿ ಕೆಲಸ ಮಾಡುತ್ತಿದ್ದ ಜ್ಯೂನಿಯರ್ ವಿದ್ಯಾರ್ಥಿನಿಯಾಗಿ ಕೆಲಸ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ವಕೀಲರದ್ದು ಎನ್ನಲಾದ 11 ನಿಮಿಷದ ಆಡಿಯೋ ವೈರಲ್ ಆಗಿದೆ. ಸಂತ್ರಸ್ತೆ ವಿದ್ಯಾರ್ಥಿನಿಗೆ ನ್ಯಾಯ ದೊರಕಿಸುವಂತೆ ಎಬಿವಿಪಿ ಆಗ್ರಹಿಸಿದೆ. ಮಂಗಳೂರು ಕಮಿಷನರ್‌ಗೆ ದೂರು ಸಲ್ಲಿಸಲಾಗಿದೆ.