Asianet Suvarna News Asianet Suvarna News

Shivamogga: ಹರ್ಷನ ಹತ್ಯೆಗೆ ಕಾರಣವೇನು..? ಸಹೋದರಿ ಹೀಗೆ ಹೇಳುತ್ತಾರೆ

ಬಜರಂಗದಳ ಕಾರ್ಯಕರ್ತ ಹರ್ಷ (Harsha) ಎಂಬಾತನ ಬರ್ಬರ ಹತ್ಯೆ ಹಿನ್ನೆಲೆಯಲ್ಲಿ ಇಡೀ ಶಿವಮೊಗ್ಗ (Shivamogga) ನಗರ ಸೋಮವಾರ ಹೊತ್ತಿ ಉರಿದಿದೆ. ದಿನವಿಡೀ ಉದ್ರಿಕ್ತ ಗುಂಪುಗಳು ಕಂಡ ಕಂಡಲ್ಲಿ ಆಸ್ತಿಪಾಸ್ತಿಗಳ ಮೇಲೆ ಕಲ್ಲು ತೂರಿ, ವಾಹನಗಳು, ಅಂಗಡಿಗಳಿಗೆ ಬೆಂಕಿ ಹಚ್ಚುವ ಮೂಲಕ ಹಿಂಸಾಚಾರಕ್ಕಿಳಿದಿದ್ದು (Violence) ಈ ವೇಳೆ 25ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. 

First Published Feb 22, 2022, 4:46 PM IST | Last Updated Feb 22, 2022, 5:16 PM IST

ಬೆಂಗಳೂರು (ಫೆ. 22): ಬಜರಂಗದಳ ಕಾರ್ಯಕರ್ತ ಹರ್ಷ (Harsha) ಎಂಬಾತನ ಬರ್ಬರ ಹತ್ಯೆ ಹಿನ್ನೆಲೆಯಲ್ಲಿ ಇಡೀ ಶಿವಮೊಗ್ಗ (Shivamogga) ನಗರ ಸೋಮವಾರ ಹೊತ್ತಿ ಉರಿದಿದೆ. ದಿನವಿಡೀ ಉದ್ರಿಕ್ತ ಗುಂಪುಗಳು ಕಂಡ ಕಂಡಲ್ಲಿ ಆಸ್ತಿಪಾಸ್ತಿಗಳ ಮೇಲೆ ಕಲ್ಲು ತೂರಿ, ವಾಹನಗಳು, ಅಂಗಡಿಗಳಿಗೆ ಬೆಂಕಿ ಹಚ್ಚುವ ಮೂಲಕ ಹಿಂಸಾಚಾರಕ್ಕಿಳಿದಿದ್ದು (Violence) ಈ ವೇಳೆ 25ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಹಿಂಸಾಚಾರದಲ್ಲಿ 30ಕ್ಕೂ ಅಧಿಕ ಅಂಗಡಿಗಳು, 32ಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿದ್ದು, ಏಳಕ್ಕೂ ಹೆಚ್ಚು ವಾಹನಗಳು ಸುಟ್ಟುಕರಕಲಾಗಿವೆ ಎಂದು ಹೇಳಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆಯನ್ನು ಎರಡು ದಿನ ವಿಸ್ತರಿಸಲಾಗಿದೆ. ಈ ಘಟನೆ ಬಗ್ಗೆ ಬಿಜೆಪಿ- ಕಾಂಗ್ರೆಸ್ ಪರಸ್ಪರ ದೋಷಾರೋಪಣೆಯಲ್ಲಿ ಮುಳುಗಿವೆ. 

Shivamogga: ಹರ್ಷ ಹತ್ಯೆ ಪ್ರಕರಣದ ತನಿಖೆ ಹೇಗೆ ನಡೆಯುತ್ತಿದೆ..? ಡಿಟೇಲ್ಸ್

ಮುಸ್ಲಿಂ ಗೂಂಡಾಗಳದ್ದೇ ಕೆಲಸ ಎಂದು ಈಶ್ವರಪ್ಪ (Eshwarappa) ಹೇಳಿದ್ರೆ, ಆರಗ ರಾಜೀನಾಮೆ ಕೊಡಬೇಕು ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.  ರಾಜ್ಯದಲ್ಲಿ ನಮ್ಮದೇ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದರೂ ನಮ್ಮ ಕಾರ್ಯಕರ್ತರುಗಳ ಕೊಲೆ ನಡೆಯುತ್ತದೆ ಎಂದರೆ ನಮಗೆ ನಾಚಿಕೆಗೇಡು. ಹಿಂದೂಪರ ಕಾರ್ಯಕರ್ತರ ಕೊಲೆ ಆದಾಗಲೆಲ್ಲಾ ಬರೀ ಕ್ರಮ ಕೈಗೊಳ್ಳುವ ಭರವಸೆ ನೀಡುತ್ತಾ ಕುಳಿತರೆ ಯಾವುದೇ ಪ್ರಯೋಜನವಿಲ್ಲ. ಹೈದರಾಬಾದ್‌ ಅತ್ಯಾಚಾರ ಪ್ರಕರಣದಲ್ಲಿ ಎನ್‌ಕೌಂಟರ್‌ ಮಾಡಿದಂತೆ ಇಲ್ಲಿಯೂ ಮಾಡಬೇಕು ಎಂದು ಸಂಸದ ಪ್ರತಾಪ್‌ ಸಿಂಹ ಆಗ್ರಹಿಸಿದ್ದಾರೆ.