ಶಿವಮೊಗ್ಗ ಹುಣಸೋಡು ಸ್ಫೋಟದ ಬಗ್ಗೆ ಬೊಮ್ಮಯಿ ಪ್ರತಿಕ್ರಿಯಿಸಿದ್ದು ಹೀಗೆ
ಶಿವಮೊಗ್ಗದ ಹುಣಸೋಡು ಬಳಿ ನಡೆದ ಜಿಲೆಟಿನ್ ಸ್ಫೋಟದಲ್ಲಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ. ಈ ದುರಂತದ ಬಗ್ಗೆ ಗೃಹ ಸಚಿವ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ
ಬೆಂಗಳೂರು (ಜ. 22): ಶಿವಮೊಗ್ಗದ ಹುಣಸೋಡು ಬಳಿ ನಡೆದ ಜಿಲೆಟಿನ್ ಸ್ಫೋಟದಲ್ಲಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ. ಈ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಡೈನಾಮೇಟ್ ಬಳಕೆಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೊಲೀಸರು, ಬಾಂಬ್ ನಿಷ್ಕ್ರಿಯ ದಳಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಯವರ ತವರು ಜಿಲ್ಲೆಯಾಗಿದ್ದರಿಂದ ಅವರ ಬಳಿ ಚರ್ಚಿಸುತ್ತೇನೆ. ತನಿಖೆಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವುದು ಖಂಡಿತ. ಕ್ವಾರಿಗಳ ನೀತಿ, ನಿಯಮಗಳ ಬಗ್ಗೆ ಗಣಿಗಾರಿಕಾ ಇಲಾಖೆ ಜೊತೆ ಚರ್ಚೆ ನಡೆಸಿ, ಕಾನೂನನ್ನು ಇನ್ನಷ್ಟು ಕಠಿಣಗೊಳಿಸುತ್ತೇವೆ' ಎಂದು ಗೃಹ ಸಚಿವ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
ಮಲೆನಾಡಿನಲ್ಲಿ ಮಹಾದುರಂತ, ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ