ಹುಣಸೋಡು ಮಹಾದುರಂತ, ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ
ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದು, ಈ ಘಟನೆಗೆ ಸಿಎಂ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು (ಜ. 22): ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದು, ಈ ಘಟನೆಗೆ ಸಿಎಂ ಸಂತಾಪ ಸೂಚಿಸಿದ್ದಾರೆ. ಈ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ' ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಈ ರೆಸ್ಟೋರೆಂಟ್‌ನಲ್ಲಿ ಬುಲೆಟ್ ಆಫರ್, ತಗೋಬೇಕು ಅಂದ್ರೆ ಎದುರಿಸಬೇಕು ಈ ಚಾಲೆಂಜ್..!
ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ' ಎಂದು ಸ್ಪಷ್ಟವಾಗಿ ಹೇಳಿದ್ದಾರೆ.