Asianet Suvarna News Asianet Suvarna News

ಮಲೆನಾಡಿನಲ್ಲಿ ಮಹಾದುರಂತ, ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

ಶಿವಮೊಗ್ಗದ ಅಕ್ರಮ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಮಹಾದುರಂತವೊಂದು ನಡೆದಿದೆ. ಗಣಿ ಪ್ರದೇಶದಲ್ಲಿ ಬಂಡೆಗಳನ್ನು ಸ್ಫೋಟಿಸಲು ಲಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಏಕಕಾಲದಲ್ಲಿ ಸ್ಫೋಟಿಸಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ. ಶೋಧ ಕಾರ್ಯ ಮುಂದುವರೆದಿದೆ. 
 

First Published Jan 22, 2021, 1:32 PM IST | Last Updated Jan 22, 2021, 1:34 PM IST

ಬೆಂಗಳೂರು (ಜ. 22): ಶಿವಮೊಗ್ಗದ ಅಕ್ರಮ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಮಹಾದುರಂತವೊಂದು ನಡೆದಿದೆ. ಗಣಿ ಪ್ರದೇಶದಲ್ಲಿ ಬಂಡೆಗಳನ್ನು ಸ್ಫೋಟಿಸಲು ಲಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಏಕಕಾಲದಲ್ಲಿ ಸ್ಫೋಟಿಸಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ. ಶೋಧ ಕಾರ್ಯ ಮುಂದುವರೆದಿದೆ. 

ಹುಣಸೋಡು ಮಹಾದುರಂತ, ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

ಈ ಘಟನೆ ಬಗ್ಗೆ ಸಿಎಂ ಪ್ರತಿಕ್ರಿಯಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದಿದ್ದೇವೆ. ಪ್ರಾಥಮಿಕ ತನಿಖೆ ನಡೆದು, ವರದಿ ಬಂದ ಬಳಿಕ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಕೊಡುವುದಕ್ಕೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಕ್ರಮ ಗಣಿಗಾರಿಕೆ ತಡೆಯಲು ನಾವು ಕ್ರಮ ಕೈಗೊಳ್ಳುತ್ತೇವೆ. ಇಂತಹ ಘಟನೆ ನಡೆಯದಂತೆ ಎಚ್ಚರ ವಹಿಸುತ್ತೇವೆ' ಎಂದು ಸಿಎಂ ಹೇಳಿದ್ದಾರೆ. 

Video Top Stories