Asianet Suvarna News Asianet Suvarna News

ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆಗೆ ಸಿದ್ದಗಂಗಾ ಶ್ರೀ ಅಸಮಾಧಾನ..!

ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆ ಮಾಡಿರುವುದು ನನಗೆ ಅಚ್ಚರಿ ತಂದಿದೆ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ.

ತುಮಕೂರು, (ನ.17): ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆ ಮಾಡಿರುವುದು ನನಗೆ ಅಚ್ಚರಿ ತಂದಿದೆ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ.

'ವೀರಶೈವ-ಲಿಂಗಾಯತ ನಿಗಮ‌ ಸ್ಥಾಪನೆ ನಾನು ಸ್ವಾಗತ ಮಾಡಲ್ಲ'

ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಧಿಕಾರ ರಚನೆ ನನಗೆ ಆಶ್ಚರ್ಯ ಎನಿಸುತ್ತದೆ. ಜಾತಿಗೊಂದು ಪ್ರಾಧಿಕಾರ ರಚನೆ ಮಾಡುತ್ತಾ ಹೋದರೆ ಅದಕ್ಕೆ ಮಿತಿನೇ ಇರಲ್ಲ. ಇದರ ಬದಲು ಎಲ್ಲಾ ಸಮಾಜ ಜಾತಿಯಲ್ಲಿ ಇದ್ದಂತಹ ಹಿಂದುಳಿದವರು ಹಾಗೂ ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ. ಅಂಥವರಿಗೆ ಹೆಚ್ಚು ಒತ್ತುಕೊಡುವ ಕೆಲಸ ಸರ್ಕಾರ ಮಾಡಿದರೆ ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.