
ಸಿದ್ದರಾಮಯ್ಯ - ಡಿಕೆಶಿ ದಿಢೀರ್ ಭೇಟಿ, ಬ್ರೇಕ್‌ಫಾಸ್ಟ್ ಮೀಟಿಂಗ್..!
ಸಿದ್ದರಾಮಯ್ಯ- ಡಿಕೆ ಶಿವಕುಮಾರ್ ದಿಡೀರ್ ಆಗಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿರುವ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಅರ್ಧಗಂಟೆಗೂ ಹೆಚ್ಚು ಸಮಯ ಚರ್ಚೆ ನಡೆಸಿದ್ದಾರೆ.
ಬೆಂಗಳೂರು (ಜು. 09): ಸಿದ್ದರಾಮಯ್ಯ- ಡಿಕೆ ಶಿವಕುಮಾರ್ ದಿಡೀರ್ ಆಗಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿರುವ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಅರ್ಧಗಂಟೆಗೂ ಹೆಚ್ಚು ಸಮಯ ಚರ್ಚೆ ನಡೆಸಿದ್ದಾರೆ.
'ಇದು ನನ್ನ ಕೊನೆಯ ಚುನಾವಣೆ, 80 ದಾಟಿದ ಮೇಲೆ ಕೋಲು ಹಿಡಿದು ರಾಜಕೀಯ ಮಾಡೋಕಾಗಲ್ಲ'
ಪದಾಧಿಕಾರಿಗಳ ಸಭೆಯ ಬಳಿಕ ಕಾರ್ಯಕರ್ತರ ಒತ್ತಡಕ್ಕೆ ಮಣಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ್ದಾರೆ. ಸಭೆಯಲ್ಲಿ ಒಗ್ಗಟ್ಟಿನ ಪ್ರದರ್ಶನವಾಗಬೇಕು, ಇದೇ ರೀತಿ ಭಿನ್ನಾಭಿಪ್ರಾಯ ಮುಂದುವರೆದರೆ ೭೦ ಸೀಟ್ ಕೂಡಾ ಬರಲ್ಲ, ಹೀಗಾಗಿ ನಾವಿಬ್ಬರೂ ಚೆನ್ನಾಗಿದ್ದೇವೆ ಎಂಬ ಸಂದೇಶ ರವಾನಿಸುವ ಸಲುವಾಗಿ ಡಿಕೆಶಿ ದಿಢೀರ್ ಆಗಿ ಸಿದ್ದರಾಮಯ್ಯ ಮನೆಗೆ ಹೋಗಿ ಚರ್ಚೆ ನಡೆಸಿದ್ದಾರೆ.