ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ, ಗೃಹ ಸಚಿವರನ್ನು ಕಿತ್ತು ಹಾಕ್ಬೇಕು: ಸಿದ್ದರಾಮಯ್ಯ
ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಟ್ವಿಟ್ ವಾರ್ ಮುಂದುವರೆದಿದೆ. ' ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲಿಯೇ ಇಂದು ಸುರತ್ಕಲ್ ನಲ್ಲಿ ಫಾಝೀಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ: ಸಿದ್ದರಾಮಯ್ಯ
ಬೆಂಗಳೂರು (ಜು. 29): ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಟ್ವಿಟ್ ವಾರ್ ಮುಂದುವರೆದಿದೆ. ' ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲಿಯೇ ಇಂದು ಸುರತ್ಕಲ್ ನಲ್ಲಿ ಫಾಝೀಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ. ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬೊಮ್ಮಾಯಿಯವರೇ ಅವರೇ ಇದಕ್ಕೆ ಹೊಣೆಗಾರರು. ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
News Hour:ಪ್ರವೀಣ್ ಹಂತಕರ ಬೇಟೆಯಲ್ಲಿ ಇಬ್ಬರು ಅರೆಸ್ಟ್: ಬಿಜೆಪಿ ಯುವ ಮುಖಂಡನ ಹತ್ಯೆಗೆ SDPI ಲಿಂಕ್?
ಇನ್ನು ಪ್ರವೀಣ್ ಹತ್ಯೆಯನ್ನು ಖಂಡಿಸಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, 'ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬಿ.ಜೆ.ಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಅಮಾನವೀಯ ಹತ್ಯೆ ಖಂಡನೀಯ. ಇಂತಹ ಕೃತ್ಯ ಎಸಗಿದ ರಕ್ತಪೀಪಾಸುಗಳ ವಿರುದ್ದ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಿ ಎಂದು ಮಾನ್ಯ ಮುಖ್ಯಮಂತ್ರಿಗಳಲ್ಲಿ ಒತ್ತಾಯಿಸುತ್ತೇನೆ' ಎಂದಿದ್ದಾರೆ.