Siddaramaiah: ಪಾಕಿಸ್ತಾನ್ ಜಿಂದಾಬಾದ್ ಎನ್ನುವವರನ್ನು ಬಿಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರವೆಂದು ಬಿಜೆಪಿ ಘೋಷಣೆ
ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ರೆ ಕಠಿಣ ಕ್ರಮ
ಎಫ್ಎಸ್ಎಲ್ ವರದಿ ಬರಲಿ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪಾಕ್ ಜಿಂದಾಬಾದ್ ಎನ್ನುವವರನ್ನು ಬಿಡುವ ಪ್ರಶ್ನೆಯೇ ಇಲ್ಲ. FSL ವರಧಿ ಆಧರಿಸಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ(CM Siddaramaiah)ವಿಧಾನಸಭೆಯಲ್ಲಿ ಹೇಳಿದ್ದಾರೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಸುಮೋಟೋ ಕೇಸ್ ದಾಖಲಿಸಿ ತನಿಖೆ ನಡೆಸಿದ್ದೇನೆ. ಏಳು ಜನರನ್ನು ಕರೆದು ವಿಚಾರಣೆ ನಡೆಸಿದ್ದೇವೆ. ದೇಶಭಕ್ತಿ ವಿಚಾರದಲ್ಲಿ ನಿಮಗಿಂತ ನೂರು ಪಟ್ಟು ಹೆಚ್ಚಿದ್ದೇವೆ ಎಂದು ಸಿಎಂ ಹೇಳಿದರು. ಇನ್ನೂ ಬಿಜೆಪಿ(BJP) ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಬಾವಿಯಲ್ಲಿ ನಿಂತು ಮಾತಾಡುವಂತಿಲ್ಲ, ನಿಯಮ ಓದಿಕೊಳ್ಳಿ ಎಂದು ಬಿಜೆಪಿ ಪ್ರತಿಭಟನೆಗೆ(Protest) ಸಿಎಂ ಸಿದ್ದರಾಮಯ್ಯ ಸಿಟ್ಟಾದರು. ಸಿಎಂ ಸಿದ್ದರಾಮಯ್ಯ ಮಾತಿನ ಮಧ್ಯೆ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ರು. ಸರ್ಕಾರಕ್ಕೆ ಧಿಕ್ಕಾರ ಎಂದು ಬಿಜೆಪಿ ಸದಸ್ಯರು ಘೋಷಣೆ ಕೂಗಿದರು. ಮುರ್ದಾಬಾದ್, ಮುರ್ದಾಬಾದ್ ಪಾಕಿಸ್ತಾನ್ ಮುರ್ದಾಬಾದ್ ಎಂದರು.
ಇದನ್ನೂ ವೀಕ್ಷಿಸಿ: Pro Pakistan Slogan: ನಮ್ಮ ಭಾರತ ಮಾತೆ ಮೇಲೆ ಆಣೆ ಮಾಡ್ತೀನಿ,ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿಲ್ಲ: ಶಫಿ ನಾಸಿಪುಡಿ