ದೇಶದ ಅಭಿವೃದ್ಧಿ ದೃಷ್ಟಿಯಿಂದ ಗ್ಯಾರಂಟಿ ಯೋಜನೆ ಜಾರಿ: ಸಿಎಂ
ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿ, ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದರು.
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು(Siddaramaiah) ಎರಡನೇ ಬಾರಿಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿದರು. ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಸಿಎಂ ಮಾತನಾಡಿದರು. ಸ್ವಾತಂತ್ರ್ಯ ಎಷ್ಟು ದುಬಾರಿ ಸಂಗತಿ ಎಂಬುದು ನಮಗೆ ಅರ್ಥವಾಗಬೇಕು. ದುಷ್ಟರ ಆಟ ಬಹಳ ದಿನ ನಡೆಯುವುದಿಲ್ಲ ಎಂದು ರಾಜ್ಯದ ಜನ ಸಾಬೀತು ಮಾಡಿದ್ಧಾರೆ ಎಂದು ಸಿಎಂ ಹೇಳಿದರು. ಸದ್ಯ ಐದು ಗ್ಯಾರಂಟಿ ಯೋಜನೆಗಳ(guarantee scheme) ಅನುಷ್ಠಾನಕ್ಕೆ ತಾತ್ವಿಕ ಅನುಮೋದನೆ ನೀಡಲಾಗಿದೆ. ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ನಮ್ಮ ಆಶ್ವಾಸನೆ ಈಡೇರಿಸಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ಬಡ, ಮಧ್ಯಮ ವರ್ಗದ ಕುಟುಂಬಗಳಲ್ಲಿ ಬದಲಾವಣೆ ತಂದಿದೆ. ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ ನೇರವಾಗಿ ಜನರಿಗೆ ತಲುಪುತ್ತಿವೆ. ಹಸಿವು ಮುಕ್ತ ಕರ್ನಾಟಕ ನಮ್ಮ ಸಂಕಲ್ಪವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ವೀಕ್ಷಿಸಿ: ಸಂಸಾರಿ ಆಗುತ್ತಿದ್ದಾರೆ ಹರ್ಷಿಕಾ-ಭುವನ್: ಆತ್ಮೀಯರಿಗೆ ಆಮಂತ್ರಣ ಕೊಟ್ಟ ಜೋಡಿ..!