ಮಾಜಿ ಸಿಎಂ ಎಸ್.ಎಂ. ಕೃಷ್ಣ ಅಂತಿಮ ದರ್ಶನ: ರಾಮನಗರ, ಚನ್ನಪಟ್ಟಣದಲ್ಲೂ ವ್ಯವಸ್ಥೆ
ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥಿವ ಶರೀರವು ಹಳೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಾಗಲಿದ್ದು, ಬಿಡದಿ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 9.30 ರಿಂದ ಪ್ರತಿ ಸ್ಥಳದಲ್ಲಿ 15-20 ನಿಮಿಷಗಳ ಕಾಲ ದರ್ಶನಕ್ಕೆ ಅವಕಾಶವಿದೆ.
ಮಾಜಿ ಸಿಎಂ ಎಸ್ ಎಂ ಕೃಷ್ಣ ವಿಧಿವಶ ಹಿನ್ನೆಲೆಯಲ್ಲಿ ನಾಳೆ ರಾಮನಗರ ಹಾಗೂ ಚನ್ನಪಟ್ಟಣದಲ್ಲಿಯೂ ಅಂತಿಮ ದರ್ಶನದ ನೇರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಹಳೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಎಸ್ ಎಂ.ಕೃಷ್ಣ ಅವರ ಪಾರ್ಥಿವ ಶರೀರ ಸಾಗಲಿದೆ. ಬಿಡದಿ, ರಾಮನಗರ, ಚನ್ನಪಟ್ಟಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಈ ಬಗ್ಗೆ ರಾಮನಗರ ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಬಿಡದಿಯ ಬಿಜೆಎಸ್ ಸರ್ಕಲ್, ರಾಮನಗರ ಐಜೂರು ವೃತ್ತ ಹಾಗೂ ಚನ್ನಪಟ್ಟಣ ಗಾಂಧಿ ಭವನ ಬಳಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.
ಬೆಳಗ್ಗೆ 9.30 ಕ್ಕೆ ಬಿಡದಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗುವುದು. ನಂತರ, ರಾಮನಗರದ ಐಜೂರು ವೃತ್ತ ಹಾಗೂ ಚನ್ನಪಟ್ಟಣದಲ್ಲಿ ಗಾಂಧಿ ಭವನದ ಬಳಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಪ್ರತಿ ಸ್ಥಳದಲ್ಲಿಯೂ 15 ರಿಂದ 20 ನಿಮಿಷಗಳು ಮಾತ್ರ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕೊಡಲಾಗುತ್ತದೆ. ಬಳಿಕ ಬೆಂಗಳೂರು-ಮೈಸೂರು ಹಳೆ ಹೆದ್ದಾರಿಯಲ್ಲಿ ಸೋಮನಹಳ್ಳಿ ತಲುಪಲಿರುವ ಎಸ್ ಎಂ ಕೃಷ್ಣ ಪಾರ್ಥೀವ ಶರೀರ ಒಕ್ಕಲಿಗ ಸಮುದಾಯದ ವಿಧಿ-ವಿಧಾನದಂತೆ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಈ ಬಗ್ಗೆ ರಾಮನಗರ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಮಾಹಿತಿ ನೀಡಿದ್ದಾರೆ.