Covid Surge: ರಾಜ್ಯದಲ್ಲಿ ಕೊರೊನಾ ಸ್ಫೋಟ, 50 ಸಾವಿರದ ಗಡಿಯತ್ತ

ರಾಜಧಾನಿಯಲ್ಲಿ (Bengaluru)  ಶುಕ್ರವಾರವೂ ಕೂಡ 29 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2.23 ಲಕ್ಷಕ್ಕೆ ಹೆಚ್ಚಳವಾಗಿದೆ.

First Published Jan 22, 2022, 10:05 AM IST | Last Updated Jan 22, 2022, 10:07 AM IST

ಬೆಂಗಳೂರು (ಜ. 22): ರಾಜಧಾನಿಯಲ್ಲಿ (Bengaluru) ಶುಕ್ರವಾರವೂ ಕೂಡ 29 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2.23 ಲಕ್ಷಕ್ಕೆ ಹೆಚ್ಚಳವಾಗಿದೆ.7,196 ಮಂದಿ ಸೋಂಕಿತರು ಬಿಡುಗಡೆಯಾಗಿದ್ದು ಇದುವರೆಗೆ 13.02 ಲಕ್ಷ ಜನರು ಗುಣಮುಖರಾಗಿದ್ದಾರೆ. ಆರು ಮಂದಿ ಸಾವಿನಿಂದ ಈವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 16,484ಕ್ಕೆ ಹೆಚ್ಚಳವಾಗಿದೆ. 

Coronavirus: ಲಾಕ್‌ಡೌನ್ ಎಚ್ಚರಿಕೆ ಕೊಟ್ಟ ಗೃಹ ಸಚಿವ ಆರಗ ಜ್ಞಾನೇಂದ್ರ

ಕಳೆದ ಒಂದು ವಾರದಿಂದ ಬಾಗಲಕೋಟೆ, ಯಾದಗಿರಿ ಹಾಗೂ ಹಾವೇರಿ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಕೊರೋನಾ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಶೇ.5ಕ್ಕಿಂತ ಹೆಚ್ಚಿದೆ. ಅದರಲ್ಲೂ ಬೆಂಗಳೂರು, ಮಂಡ್ಯ, ಹಾಸನದಲ್ಲಿ ಪಾಸಿಟಿವಿಟಿ ದರ ಶೇ.20ರ ಗಡಿ ದಾಟಿದ್ದು, ಈ ಜಿಲ್ಲೆಗಳಲ್ಲಿ ಕೋವಿಡ್‌ ಪರೀಕ್ಷೆಗೊಳಗಾಗುವ ಪ್ರತಿ ಐದು ಮಂದಿಯ ಪೈಕಿ ಒಬ್ಬರಲ್ಲಿ ಸೋಂಕು ದೃಢಪಡುತ್ತಿದೆ.