Asianet Suvarna News Asianet Suvarna News

ತಣ್ಣಗಾಗಿದ್ದ ಹಿಜಾಬ್ ವಿವಾದ ಮಂಗಳೂರಲ್ಲಿ ಮತ್ತೆ ಆರಂಭ

ಕೆಲ ದಿನಗಳಿಂದ ತಣ್ಣಗಾಗಿದ್ದ ಹಿಜಾಬ್ ವಿವಾದ ಮತ್ತೆ ಭುಗಿಲೇಳುವ ಲಕ್ಷಣಗಳು ಕಾಣುತ್ತಿವೆ. ಶಾಲೆ ಕಾಲೇಜುಗಳಲ್ಲಿ ಸೂಚಿಸಿದ ಸಮವಸ್ತ್ರವನ್ನೇ ಧರಿಸಬೇಕು ಎಂದು ಹೈಕೋರ್ಟ್ ಆದೇಶವನ್ನು ಜಾರಿಗೆ ತರುವಂತೆ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಗುರುವಾರ ಕ್ಯಾಂಪಸ್ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಮಂಗಳೂರು (ಮೇ. 26): ರಾಜ್ಯದಲ್ಲಿ ಧರ್ಮದಂಗಲ್ ಗೆ ಮೂಲ ಕಾರಣವಾಗಿದ್ದ ಹಿಜಾಬ್ (Hijab) ವಿವಾದ ಮತ್ತೆ ಭುಗಿಲೇಳುವ ಲಕ್ಷಣಗಳು ಕಾಣುತ್ತಿವೆ. ಹೈಕೋರ್ಟ್ ಆದೇಶವನ್ನು ಜಾರಿಗೆ ತರುವಂತೆ ಆಗ್ರಹಿಸಿ ಮಂಗಳೂರು ವಿಶ್ವವಿದ್ಯಾನಿಲಯದ ( University College Mangalore) ವಿದ್ಯಾರ್ಥಿಗಳು (Students) ಗುರುವಾರ ಕ್ಯಾಂಪಸ್ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಮಂಗಳೂರಿನ ಹಂಪನಕಟ್ಟೆಯಲ್ಲಿರೋ (Hampanakatte) ಕಾಲೇಜಿನಲ್ಲಿ ಹಿಜಾಬ್ ಹಾಕಲು ಕೆಲ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಿದ ಬೆನ್ನಲ್ಲಿಯೇ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಪ್ರತಿಭಟನೆ‌‌ ಆರಂಭವಾಗಿದೆ. ಕ್ಲಾಸ್ ಗಳನ್ನು ಬಹಿಷ್ಕರಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಕುಳಿತಿದ್ದಾರೆ.

ಹಿಜಾಬ್ ವಿವಾದ ಎದ್ದಿದ್ದ ಉಡುಪಿ ಕಾಲೇಜಿನ ವಿದ್ಯಾರ್ಥಿನಿ ಅಮೋಘ ಸಾಧನೆ

ಹಿಜಾಬ್ ಗೆ ಅವಕಾಶ ನೀಡಿದ್ದರೆ, ನಮಗೂ ಕೇಸರಿ ಶಾಲು ಹಾಕಲು ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದಾರೆ.  ಇತ್ತೀಚೆಗೆ ಕಾಲೇಜು ಆಡಳಿತ ಮಂಡಳಿ ಮೀಟಿಂಗ್ ನಲ್ಲೂ ಹಿಜಾಬ್ ಹಾಕಬಾರದು ಅಂತಾ ನಿರ್ಧಾರ ಮಾಡಲಾಗಿತ್ತು. ಆದರೆ, ಗುರುವಾರ ಕಾಲೇಜಿಗೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಹಾಕಿ ಬಂದಿದ್ದರಿಂದ ಮತ್ತೆ ವಿವಾದ ಆರಂಭವಾಗಿದೆ.

Video Top Stories