ಧರ್ಮ ದಂಗಲ್: ಮುಂದಿನ ವಾರ ಸುಪ್ರೀಂ ಕೋರ್ಟ್‌ನಲ್ಲಿ ಹಿಜಾಬ್ ವಿಚಾರಣೆ?
ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ಹಿಜಾಬ್ ವಿವಾದ, ಮತ್ತೆ ಪ್ರತಿಧ್ವನಿಸುವ ಸಾಧ್ಯತೆ ಇದೆ. ಹೈಕೋರ್ಟ್ ತೀರ್ಪು ಪ್ರಶ್ನಿಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸುವಂತೆ ವಕೀಲ ಪ್ರಶಾಂತ್ ಭೂಷಣ್ ಮನವಿ ಮಾಡಿದ್ದಾರೆ.
ಬೆಂಗಳೂರು (ಜು. 13): ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ಹಿಜಾಬ್ ವಿವಾದ (Hijab Row) ಮತ್ತೆ ಪ್ರತಿಧ್ವನಿಸುವ ಸಾಧ್ಯತೆ ಇದೆ. ಹೈಕೋರ್ಟ್ ತೀರ್ಪು ಪ್ರಶ್ನಿಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸುವಂತೆ ವಕೀಲ ಪ್ರಶಾಂತ್ ಭೂಷಣ್ ಮನವಿ ಮಾಡಿದ್ದಾರೆ. ಮುಂದಿನ ವಾರ ಸುಪ್ರೀಂ ಕೋರ್ಟ್ (Supreme Court) ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ರಾಷ್ಟ್ರ ರಾಜಕಾರಣ ತೊರೆದು ರಾಜ್ಯ ರಾಜಕೀಯದತ್ತ ಬಿಜೆಪಿ ನಾಯಕರು! ಯಾರವರು..?
"ಹಿಜಾಬ್ ಧರಿಸುವುದು ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ. ವಿದ್ಯಾರ್ಥಿನಿಯರಿಗೆ ವಸ್ತ್ರ ಸಂಹಿತೆ ಕಡ್ಡಾಯ’ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಈ ಆದೇಶವನ್ನು ಈಗ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ.