ಸುರೇಶ್ ಅಂಗಡಿ ನಿಧನ: ರಾಜ್ಯಾದ್ಯಂತ ಶೋಕಾಚರಣೆ; ಸರ್ಕಾರಿ ಸಭೆ, ಸಮಾರಂಭ ರದ್ದು!
ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ ಹಿನ್ನೆಲೆ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರ ಧ್ವಜವನ್ನು ಅರ್ಧಕ್ಕಿಳಿಸಲು ಆದೇಶ ನೀಡಲಾಗಿದೆ. ರಾಜ್ಯಾದ್ಯಂತ ಶೋಕಾಚರಣೆ ಆಚರಿಸಲಾಗುತ್ತಿದ್ದು, ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.
ಬೆಂಗಳೂರು(ಸೆ.24) ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ ಹಿನ್ನೆಲೆ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರ ಧ್ವಜವನ್ನು ಅರ್ಧಕ್ಕಿಳಿಸಲು ಆದೇಶ ನೀಡಲಾಗಿದೆ. ರಾಜ್ಯಾದ್ಯಂತ ಶೋಕಾಚರಣೆ ಆಚರಿಸಲಾಗುತ್ತಿದ್ದು, ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.
ಇನ್ನು ಕೊರೋನಾ ಸೋಂಕಿನಿಂದ ಸಚಿವರು ನಿಧನಪಟ್ಟ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ಹಾಗೂ ಕುಟುಂಬಸ್ಥರ ಒಪ್ಪಿಗೆ ಮೇರೆಗೆ ದೆಹಲಿಯ ದ್ವಾರಕಾ ಸೆಕ್ಟರ್ 24ರ ಲಿಂಗಾಯುತ ರುಧ್ರಭೂಮಿಯಲ್ಲಿ ನೆರವೇರಿಸಲು ತೀರ್ಮಾನ ಮಾಡಲಾಗಿದೆ.