ಇ-ಟೆಂಡರ್ಗೆ ಬನ್ನಿ ಅಂತಿದೆ TTD: ಇ-ಟೆಂಡರ್ಗೆ ಬರಕ್ಕಾಗಲ್ಲ ಎಂತಿದೆ KMF
ಪ್ರಸಿದ್ಧ ತಿರುಪತಿ ದೇಗುಲದಲ್ಲಿ ತಯಾರಿಸುವ ಲಡ್ಡು ತಯಾರಿಕೆಗೆ ತುಪ್ಪ ಪೂರೈಸಲು ಕಡಿಮೆ ದರ ನಮೂದಿಸಿದ್ದ ಬೇರೊಂದು ಕಂಪನಿಯೊಂದನ್ನು ಆಯ್ಕೆ ಮಾಡಲಾಗಿದೆ’ ಎಂದು ತಿರುಪತಿ ದೇಗುಲದ ಉಸ್ತುವಾರಿ ಹೊತ್ತಿರುವ ಟಿಟಿಡಿ ಇತ್ತಿಚೆಗಷ್ಟೇ ಸ್ಪಷ್ಟಪಡಿಸಿತ್ತು.
ಬೆಂಗಳೂರು (ಆ.03): ಪ್ರಸಿದ್ಧ ತಿರುಪತಿ ದೇಗುಲದಲ್ಲಿ ತಯಾರಿಸುವ ಲಡ್ಡು ತಯಾರಿಕೆಗೆ ತುಪ್ಪ ಪೂರೈಸಲು ಕಡಿಮೆ ದರ ನಮೂದಿಸಿದ್ದ ಬೇರೊಂದು ಕಂಪನಿಯೊಂದನ್ನು ಆಯ್ಕೆ ಮಾಡಲಾಗಿದೆ’ ಎಂದು ತಿರುಪತಿ ದೇಗುಲದ ಉಸ್ತುವಾರಿ ಹೊತ್ತಿರುವ ಟಿಟಿಡಿ ಇತ್ತಿಚೆಗಷ್ಟೇ ಸ್ಪಷ್ಟಪಡಿಸಿತ್ತು. ದುಬಾರಿ ದರ ನಿಗದಿಪಡಿಸಿದ್ದ ಕರ್ನಾಟಕದ ‘ನಂದಿನಿ’ ತುಪ್ಪದ ಟೆಂಡರ್ ರದ್ದು ಮಾಡಲಾಗಿದೆ ಎಂಬ ವಿವಾದದ ಬಗ್ಗೆ ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಧರ್ಮಾರೆಡ್ಡಿ, ‘ನಮ್ಮದು ಸರ್ಕಾರಿ ಸಂಸ್ಥೆ. ಹೀಗಾಗಿ ದೇಗುಲಕ್ಕೆ ಬೇಕಾದ ಎಲ್ಲಾ ವಸ್ತುಗಳ ಖರೀದಿಗೂ ಟೆಂಡರ್ ಮಾರ್ಗ ಅನುಸರಿಸಲಾಗುತ್ತದೆ. ಅದರಲ್ಲಿ ನಮ್ಮ ಮಾನದಂಡ ಪೂರೈಸಿ, ಅತ್ಯಂತ ಕಡಿಮೆ ದರ ನಮೂದು ಮಾಡಿದವರನ್ನು ಆಯ್ಕೆ ಮಾಡಿಕೊಳ್ಳುತ್ತೇವೆ.
ಹೀಗಾಗಿ ಕರ್ನಾಟಕದ ಕೆಎಂಎಫ್‌ಗೆ ಅವಕಾಶ ನೀಡಿಲ್ಲ ಎಂಬುದು ಸರಿಯಲ್ಲ. ಮೇಲಾಗಿ ಈ ಹಿಂದೆ 2023ರ ಮಾರ್ಚ್‌ನಲ್ಲಿ ನಡೆದ ಟೆಂಡರ್ ಪ್ರಕ್ರಿಯೆಯಲ್ಲಿ ಕೆಎಂಎಫ್ ಭಾಗವಹಿಸಿರಲಿಲ್ಲ’ ಎಂದು ಹೇಳಿದ್ದರು. ಇದೆ ವೇಳೆ ಸತತವಾಗಿ ಕಳೆದ 20 ವರ್ಷಗಳಿಂದ ಕೆಎಂಎಫ್, ಟಿಟಿಡಿಗೆ ತುಪ್ಪ ಪೂರೈಕೆ ಮಾಡುತ್ತಿತ್ತು ಎಂಬ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿಕೆಯನ್ನೂ ಅವರು ತಳ್ಳಿಹಾಕಿದ್ದರು. ಇನ್ನು ನಂದಿನಿ ತುಪ್ಪ ಉತ್ಕೃಷ್ಟ ಗುಣಮಟ್ಟದ ತುಪ್ಪವಾಗಿದ್ದು, ಸ್ಪರ್ಧಾತ್ಮಕ ಬೆಲೆಯಲ್ಲಿ ಪೂರೈಕೆ ಮಾಡಲು ಸಾಧ್ಯವಿಲ್ಲ. ಹಾಗಾಗಿ ತಿರುಪತಿ ತಿರುಮಲ ಟ್ರಸ್ಟ್ನ ಟೆಂಡರ್ನಲ್ಲಿ ನಾವು ಭಾಗವಹಿಸಿಲ್ಲ. ತಿರುಪತಿಗೆ ದೇವಸ್ಥಾನಕ್ಕೆ ತುಪ್ಪ ಸರಬರಾಜು ಮಾಡುವುದಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟಪಡಿಸಿದ್ದರು. ಕಂಪ್ಲಿಟ್ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.