Shivamogga: ಹಿಂದೂಪರ ಕಾರ್ಯಕರ್ತನ ಭೀಕರ ಹತ್ಯೆ, ಪರಿಸ್ಥಿತಿ ಉದ್ನಿಗ್ನ, 144 ಸೆಕ್ಷನ್‌ ಜಾರಿ

ಶಿವಮೊಗ್ಗ (Shivamogga) ಹಿಂದೂಪರ ಕಾರ್ಯಕರ್ತ (Hindu Activits) ಹರ್ಷ ಎಂಬಾತನನ್ನು ಅಪರಿಚಿತ ದುರ್ಷರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ತೀರ್ಥಹಳ್ಳಿ ರಸ್ತೆಯ ಭಾರತಿ ಕಾಲೋನಿಯಲ್ಲಿ ನಡೆದಿದೆ. 

First Published Feb 21, 2022, 9:39 AM IST | Last Updated Feb 21, 2022, 9:39 AM IST

ಶಿವಮೊಗ್ಗ (ಫೆ. 21): ಹಿಂದೂಪರ ಕಾರ್ಯಕರ್ತ (Hindu Activits) ಹರ್ಷ ಎಂಬಾತನನ್ನು ಅಪರಿಚಿತ ದುರ್ಷರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ತೀರ್ಥಹಳ್ಳಿ ರಸ್ತೆಯ ಭಾರತಿ ಕಾಲೋನಿಯಲ್ಲಿ ನಡೆದಿದೆ. ಘಟನೆಯಿಂದಾಗಿ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಎರಡು ಕಡೆ ಕಲ್ಲುತೂರಾಟ ನಡೆದ ಘಟನೆಯೂ ವರದಿಯಾಗಿದೆ. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ನಗರ ವ್ಯಾಪ್ತಿಯಲ್ಲಿ ಸೋಮವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಈಗಾಗಲೇ ಜಾರಿಯಲ್ಲಿದ್ದ 144 ಸೆಕ್ಷನ್‌ ಅನ್ನು ಮತ್ತೆರಡು ದಿನ ವಿಸ್ತರಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಸುದ್ದಿ ತಿಳಿಯುತ್ತಿದ್ದಂತೆ  ಮೆಗ್ಗಾನ್‌ ಆಸ್ಪತ್ರೆ ಎದುರು ನೂರಾರು ಮಂದಿ ಜಮಾಯಿಸಿದ್ದು, ಈ ವೇಳೆ ಕೆಲವರು ಆಸ್ಪತ್ರೆಯ ಮೇಲೆ ಕಲ್ಲು ತೂರಿದ್ದಾರೆ. ಇದರಿಂದ ಆಸ್ಪತ್ರೆ ಗಾಜುಗಳಿಗೆ ಹಾನಿಯಾಗಿದೆ.

ಕಲ್ಲುತೂರಾಟ-ಘಟನೆ ಬೆನ್ನಲ್ಲೇ ನಗರದ ರವಿವರ್ಮ ಬೀದಿ ಮತ್ತು ಆಜಾದ್‌ ನಗರದಲ್ಲಿ ಕಲ್ಲುತೂರಾಟದ ಘಟನೆ ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದಾರೆ. ಈ ಮಧ್ಯೆ, ನಗರದ ಎಲ್ಲೆಡೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. 

 

Video Top Stories